ಕಟ್ಟಡ ಕಾರ್ಮಿಕರ ಕಾರ್ಡ್‌ಗಳ ದುರುಪಯೋಗ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ
ಅನರ್ಹ ಕಾರ್ಡ್‌ಗಳನ್ನು ರದ್ದುಪಡಿಸಿ, ಅರ್ಹರಿಗೆ ಮಾತ್ರ ಸೌಲಭ್ಯ ದೊರೆಯುವುದನ್ನು ಖಾತ್ರಿಪಡಿಸಬೇಕು .
ಪೊಲೀಸ್ ಕಾನ್ಸ್‌ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳಲ್ಲಿ 2025 ಸಿಂಧುತ್ವ ಪ್ರಮಾಣ ಪತ್ರಗಳು ವಿಲೇವಾರಿಗೆ ಬಾಕಿಯಿದೆ. ಜಿಲ್ಲಾಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸಿಂಧುತ್ವ ಪ್ರಮಾಣ ಪತ್ರವನ್ನು ಆದಷ್ಟು ಬೇಗನೆ ನೀಡಬೇಕು. ಪೊಲೀಸ್ ಗೃಹ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಒದಗಿಸಬೇಕು ಎಂದರು.
ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ ಸಂಬಂಧಿಸಿದಂತೆ ರೂ. 1252 ಕೋಟಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿದ್ದು, ಇದುವರೆಗೆ ಕೋಟಿ ರೂ. ವೆಚ್ಚವಾಗಿದೆ. ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಅನುಷ್ಠಾನಗೊಳಿಸುವ ಮೂಲಕ ಅನುದಾನ ವೆಚ್ಚ ಮಾಡಬೇಕು.
ಯುವ ಸಬಲೀಕರಣ : ಬೆಂಗಳೂರಿನಲ್ಲಿ ಯಲಹಂಕ ಬಳಿ 60 ಎಕ್ರೆ ಪ್ರದೇಶದಲ್ಲಿ ಕ್ರೀಡಾ ನಗರ ನಿರ್ಮಾಣಕ್ಕೆ ಜಮೀನು ಒದಗಿಸುವ ಪ್ರಸ್ತಾವನೆಯನ್ನು ಸಂಪುಟದ ಮುಂದಿರಿಸಬೇಕು. ಇದೇ ರೀತಿ ಬೆಂಗಳೂರಿನಲ್ಲಿ ನಾಲ್ಕು ಸ್ಥಳಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ತಲಾ ಕನಿಷ್ಠ 2 ಎಕರೆ ಜಮೀನು ಗುರುತಿಸಬೇಕು. ಮೈಸೂರಿನಲ್ಲಿ ಸೈಕ್ಲಿಂಗ್ ವೆಲೋಡ್ರಾಂ ನಿರ್ಮಾಣಕ್ಕೆ 14 ಎಕರೆ ಜಮೀನು ಹಸ್ತಾಂತರಿಸುವ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕ್ರೀಡಾಂಗಣ ಇಲ್ಲದ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಿಸಲು ಜಮೀನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
Comments are closed.