ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಟ್ಯೂಶನ್ ಕ್ಲಾಸ್ ನೀಡಿ: ಎಸ್.ಮಧು ಬಂಗಾರಪ್ಪ
ಕೋಮಲಾಪುರದಲ್ಲಿ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭಕ್ಕೆ ಶಿಕ್ಷಣ ಸಚಿವರಿಂದ ಚಾಲನೆ
: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅವಶ್ಯಕತೆ ಇರುವ ಮಕ್ಕಳಿಗೆ ಟ್ಯೂಶನ್ ಕ್ಲಾಸ್ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಶಾಲಾ ಮುಖ್ಯಸ್ಥರಿಗೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
2024-25ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ಜಿಲ್ಲೆಯ ಕುಕನೂರು ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭಕ್ಕೆ ಜುಲೈ 10ರಂದು ಶಾಲಾ ನಾಮಫಲಕ ಅನಾವರಣಗೊಳಿಸುವುದರ ಮೂಲಕ ಚಾಲನೆ ನೀಡಿ, ಬಳಿಕ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಸಂಕಷ್ಟದಲ್ಲಿರುವವರ ಮಕ್ಕಳಿಗೆ ವಿದ್ಯಾಭ್ಯಾಸದ ಮೂಲಕ ಅವರನ್ನು ಮುನ್ನೆಲೆಗೆ ತರುವಂತಹ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಈ ಭಾಗದದ ಶೈಕ್ಷಣಿಕ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ ವಿಶೇಷ ಅನುದಾನವನ್ನು ಮೀಸಲಿಡಲಾಗಿದೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ನೀಟ್ ಕ್ಲಾಸ್, ಸಿಇಟಿ ಪರೀಕ್ಷೆಯ ಪೂರ್ವಭಾವಿ ತರಬೇತಿಯನ್ನು ಸರ್ಕಾರದಿಂದಲೇ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ತರಬೇತಿಗಾಗಿ ಈಗಾಗಲೇ ಅನುದಾನವನ್ನು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಮೀಸಲಿಟ್ಟಿದ್ದಾರೆ. ಇದಲ್ಲದೆ ಸರ್ಕಾರಿ ಶಾಲೆಗಳಿಗೂ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಈ ಸೌಲಭ್ಯ ಸದುಪಯೋಗ ಆಗಬೇಕು. ಶಾಲೆಯ ತರಗತಿ ಅವಧಿ ಪೂರ್ಣಗೊಂಡ ಬಳಿಕ ಅವಶ್ಯಕತೆ ಇರುವ ವಿದ್ಯಾರ್ಥಿಗಳಿಗೆ ಟ್ಯೂಶನ್ ಕ್ಲಾಸ್ ನೀಡಲು ಆಯಾ ಶಾಲೆಗಳ ಶಿಕ್ಷಕರು ಎಸ್.ಡಿ.ಎಂ.ಸಿ.ಯೊAದಿಗೆ ಅನುಮತಿ ಹಾಗೂ ಗ್ರಾಮ ಪಂಚಾಯತ್ ಸಹಕಾರ ಪಡೆದು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿತ್ತು. 10 ತಿಂಗಳಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಹಂತ ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಈ ಸಮಸ್ಯೆಯನ್ನು ಸರಿಪಡಿಸಲಾಗುವುದು. ಅನುದಾನಿತ ಶಾಲೆಗಳು ಸಹ ಸರ್ಕಾರದ ಒಂದು ಭಾಗವಾಗಿ ಕೆಲಸ ಮಾಡುತ್ತವೆ. ಈ ಅನುದಾನಿತ ಶಾಲೆಗಳಲ್ಲಿ 2015 ರಿಂದ 2024ರವರೆಗೆ ಕಳೆದ 9 ವರ್ಷಗಳಿಂದ ಶಿಕ್ಷಕರನ್ನು ಪಡೆದಿಲ್ಲ. ಇಂತಹ ಶಾಲೆಗಳಲ್ಲಿಯೂ ಸಹ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಹಾಗೂ ರಾಜ್ಯದಲ್ಲಿ 10 ರಿಂದ 18 ಸಾವಿರ ಸರ್ಕಾರಿ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.
ತಳಕಲ್ ಗ್ರಾಮದಲ್ಲಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ನಿರ್ಮಾಣ ಮಾಡಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಇಂಜಿನಿಯರಿAಗ್ ಕಾಲೇಜು ಭೇಟಿ ಸಂದರ್ಭದಲ್ಲಿAದು ನಮ್ಮ ಸೊರಬ ಕ್ಷೇತ್ರ ವಿದ್ಯಾರ್ಥಿ ಇಲ್ಲಿ ಇಂಜಿನಿಯರಿAಗ್ ವಿದ್ಯಾಭ್ಯಾಸ ಮಾಡುತ್ತಿರುವುದು ಕಂಡುಬAತು. ತಳಕಲ್ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಯಾವುದೇ ಖಾಸಗಿ ಕಾಲೇಜುಗಳಿಗೆ ಕಡಿಮೆಯಿಲ್ಲ ಎಂಬAತೆ ನಿರ್ಮಾಣವಾಗಿದೆ. ಸರ್ಕಾರದ ಹಣದಲ್ಲಿ ಬಡ ಮಕ್ಕಳು ಸಹ ಒಳ್ಳೆಯ ರೀತಿಯಲ್ಲಿ ಶಿಕ್ಷಣವನ್ನು ಪಡೆಯಬೇಕು ಎಂಬ ಕನಸನ್ನು ನನಸು ಮಾಡಿದ ಕೀರ್ತಿ ಬಸವರಾಜ ರಾಯರೆಡ್ಡಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಸೇರಿದಂತೆ ವಿವಿಧ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು ಅಂದಿನ ಕಾಲದಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿ, ರೈತರ ಬಾಳಿಗೆ ಬೆಳಕಾದರೆ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ಮಾಡುವುದರ ಮೂಲಕ ಪ್ರತಿಯೊಂದು ಮನೆಗೆ ಉಚಿತ ಬೆಳಕನ್ನು ನೀಡಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ವಿವಿಧ ಯೋಜನೆಗಳಡಿ ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಲೆ, ಜೂನಿಯರ್ ಕಾಲೇಜುಗಳು, ಪದವಿ ಕಾಲೇಜುಗಳನ್ನು ಪ್ರಾರಂಭಿಸಲಾಗುತ್ತಿದೆ. ನಮ್ಮ ಸರ್ಕಾರವು ಜಾರಿಗೆ ತಂದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ 4 ಕೋಟಿ 37 ಲಕ್ಷ ಜನಕ್ಕೆ 10 ಕೆ.ಜಿ. ಆಹಾರ ಧಾನ್ಯಗಳನ್ನು ಕೊಡಲಾಗುತ್ತಿದ್ದು, ಶೇ.85.3 ರಷ್ಟು ಜನರಿಗೆ ಆಹಾರಧಾನ್ಯಗಳು ತಲುಪುತ್ತಿವೆ. ಈ ಪ್ರಕ್ರಿಯೆ ತಮಿಳುನಾಡಿನಲ್ಲಿ ಶೇ.40, ಮಹಾರಾಷ್ಟçದಲ್ಲಿ ಶೇ.60, ಗುಜರಾತ್ ರಾಜ್ಯದಲ್ಲಿ ಶೇ.50 ರಷ್ಟಿದ್ದು, ಇಡೀ ಭಾರತ ದೇಶದಲ್ಲಿ ಅತಿ ಹೆಚ್ಚಿನ ಆಹಾರಧಾನ್ಯಗಳನ್ನು ಉಚಿತವಾಗಿ ನೀಡುತ್ತಿರುವ ರಾಜ್ಯ ನಮ್ಮ ಕರ್ನಾಟಕವಾಗಿದೆ. ಗೃಹಲಕ್ಷಿö್ಮÃ ಯೋಜನೆಯಡಿ 1.29 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2 ಸಾವಿರ ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಪ್ರತಿದಿನ ಸರಾಸರಿ 63 ಲಕ್ಷ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. 1.24 ಕೋಟಿ ಮನೆಗಳಿಗೆ ಗೃಹಜ್ಯೋತಿಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗಿದೆ. ಉದ್ಯೋಗನಿಧಿ ಯೋಜನೆಗೆ 5 ಕೋಟಿಯನ್ನು ನೀಡಲಾಗಿದೆ ಎಂದರು.
ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ: ತಾವು 1985ರಲ್ಲಿ ಶಾಸಕರಾದಾಗ ಯಲಬುರ್ಗಾ ಕ್ಷೇತ್ರದಲ್ಲಿ ಕೇವಲ 7 ಶಾಲೆಗಳಿದ್ದವು. ಈ ಸಂಖ್ಯೆಯನ್ನು ಈಗ 60ಕ್ಕೆ ಏರಿಸಲಾಗಿದೆ. ಈ ಕ್ಷೇತ್ರಕ್ಕೆ ಇಂಜಿನಿಯರಿAಗ್ ಕಾಲೇಜು, ಜೂನಿಯರ್ ಕಾಲೇಜು, ಡಿಪ್ಲೋಮಾ, ಪದವಿ ಕಾಲೇಜುಗಳನ್ನು ತರಲಾಗಿದ್ದು, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ ಈ ಭಾಗದ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ ಎಂದ ಅವರು, ಕೋಮಲಾಪುರ ಪ್ರೌಢಶಾಲೆಗೆ 4 ಎಕರೆ ಜಮೀನು ಹಾಗೂ ಕೆರೆ ತುಂಬಿಸುವ ಯೋಜನೆಗೂ ಜಮೀನು ಅವಶ್ಯಕತೆ ಇದ್ದು, ರೈತರು ಜಮೀನು ನೀಡಲು ಮುಂದೆ ಬರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ, ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ್ ಬಿರಾದಾರ್, ಭಾನಾಪುರ ಗ್ರಾ.ಪಂ ಅಧ್ಯಕ್ಷರಾದ ಕರಿಯಪ್ಪ ಬಿ.ಹೆಚ್., ಸದಸ್ಯರಾದ ಮುತ್ತಮ್ಮ ಬಿ.ಕೆ ಹಾಗೂ ಮೈಲಾರಗೌಡ ಬಿ.ಎಂ ಸೇರಿದಂತೆ, ತಹಶೀಲ್ದಾರರು, ತಾ.ಪಂ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವಿವಿಧ ಕಾರ್ಯಕ್ರಮಗಳಿಗೆ ಸಚಿವರಿಂದ ಚಾಲನೆ: ಜುಲೈ 10 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಕುಕನೂರು ತಾಲ್ಲೂಕಿನ ತಳಕಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಹೆರಿಗೆ ಆಸ್ಪತ್ರೆ, ಕೋಮಲಾಪುರದ ನೂತನ ಸರ್ಕಾರಿ ಪ್ರೌಢಶಾಲೆ, ಯಲಬುರ್ಗಾ ತಾಲ್ಲೂಕಿನ ಕರಮುಡಿ ಗ್ರಾಮದ ನೂತನ ಪದವಿ ಪೂರ್ವ ಕಾಲೇಜು ಹಾಗೂ ದಮ್ಮೂರಿನ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಸೇರಿದಂತೆ ಮತ್ತಿತರರಿದ್ದರು.
Comments are closed.