ಎಚ್‌ಆರ್‌ಸಿ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಧಿಕಾರಿಗಳು ಸಕಾಲದಲ್ಲಿ ವರದಿ ಸಲ್ಲಿಸಬೇಕು: ಟಿ.ಶ್ಯಾಮ್ ಭಟ್
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆ
ಮಾನವ ಹಕ್ಕುಗಳ ಉಲ್ಲಂಘನೆ ಕುರಿತಾದ ಪ್ರಕರಣಗಳಲ್ಲಿ ಅಧಿಕಾರಿಗಳು ಆಯೋಗಕ್ಕೆ ಸಕಾಲದಲ್ಲಿ ವರದಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾನವ ಹಕ್ಕು ಉಲ್ಲಂಘನೆ ಕುರಿತಾಗಿ ಯಾವುದೇ ಇಲಾಖೆಗೆ ದಾಖಲಾಗುವ ದೂರುಗಳಿಗೆ ತಕ್ಷಣವೇ ಸೂಕ್ತ ಹಿಂಬರಹವನ್ನು ನೀಡಿ, ಪ್ರಕರಣದ ತನಿಖೆ ನಡೆಸಿ ಸಂಪೂರ್ಣ ವರದಿಯನ್ನು ಅಧಿಕಾರಿಗಳು ಸಕಾಲದಲ್ಲಿ ಆಯೋಗಕ್ಕೆ ಸಲ್ಲಿಸಬೇಕು. ಅನಗತ್ಯ ವಿಳಂಬ ಹಾಗೂ ದೂರುದಾರರೊಂದಿಗೆ ಅನುಚಿತ ವರ್ತನೆ ಸರಿಯಲ್ಲ. ದೂರು ಸಲ್ಲಿಸಲು ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ. ದೂರಿನ ವಿಷಯ ನಿಮ್ಮ ವ್ಯಾಪ್ತಿಯಲ್ಲಿ ಇದ್ದರೆ ಆ ಕುರಿತು ಕ್ರಮ ಕೈಗೊಳ್ಳಿ. ಇಲ್ಲದೇ ಇದ್ದಲ್ಲಿ ಸಂಬAಧಿಸಿದ ಇಲಾಖೆ ಅಥವಾ ಅಧಿಕಾರಿಗಳ ಮಾಹಿತಿ ನೀಡಿ ಪ್ರಕರಣವನ್ನು ವರ್ಗಾಯಿಸಿ. ಈ ಬಗ್ಗೆ ದೂರುದಾರರಿಗೆ ಸ್ಪಷ್ಟ ಮಾಹಿತಿ ನೀಡಿ. ಸಂಪರ್ಕಿಸಬೇಕಾದ ವಿಳಾಸ, ಇಲಾಖೆಯ ಬಗ್ಗೆ ತಿಳುವಳಿಕೆ ನೀಡಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಎಚ್‌ಆರ್‌ಸಿ ಪ್ರಕರಣಕ್ಕೆ ಸಂಬAಧಿಸಿದAತೆ ಅಧಿಕಾರಿಗಳನ್ನು ಹಾಗೂ ದೂರುದಾರರನ್ನು ಬೆಂಗಳೂರಿನ ಆಯೋಗದ ಕಚೇರಿಗೆ ಕರೆಸುವುದು, ಈ ಮೂಲಕ ಅಧಿಕಾರಿಗಳ ಹಾಗೂ ದೂರುದಾರರ ಸಮಯವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಲು ಆಯೋಗದಿಂದ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲಾಗುತ್ತಿದೆ. ದೂರುದಾರರು ಹಾಗೂ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಒಂದೇ ಕಡೆ ಲಭ್ಯವಾಗುವುದರಿಂದ ಪ್ರಕರಣವನ್ನು ಶೀಘ್ರವಾಗಿ ವಿಲೇ ಮಾಡಲು ಅನುಕೂಲವಾಗುತ್ತದೆ. ಸಾರ್ವಜನಿಕರ ದೂರಿಗೆ ಸಂಬAಧಿಸಿದAತೆ ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು. ನಿಮ್ಮ ವ್ಯಾಪ್ತಿಯಲ್ಲಿ ಬರದೇ ಇದ್ದಲ್ಲಿ ಅಥವಾ ಕಾನೂನು ಚೌಕಟ್ಟಿಗೆ ಒಳಪಡದೇ ಇದ್ದಲ್ಲಿ ಆ ಬಗ್ಗೆ ದೂರುದಾರರಿಗೆ ಕೂಡಲೇ ಹಿಂಬರಹ ನೀಡಿ. ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ ಮಾಡಬೇಡಿ ಎಂದು ಅವರು ಹೇಳಿದರು.
ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಮಾತನಾಡಿ, ಕಳೆದ ನವೆಂಬರ್‌ನಿAದ ಆಯೋಗ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ದಾಖಲಾದ ಒಟ್ಟು 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 5 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆದು ಅವುಗಳನ್ನು ರಕ್ಷಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅಗತ್ಯ ಮೂಲಭೂತ ಸೌಕರ್ಯಗಳನ್ನು ಪಡೆಯುವುದು ಪ್ರತಿಯೊಬ್ಬ ಮಾನವನ ಹಕ್ಕಾಗಿದೆ. ಅದರಂತೆ ವಸತಿ ಶಾಲೆಗಳಲ್ಲಿ, ಕಾರಾಗೃಹಗಳಲ್ಲಿ, ಆಸ್ಪತ್ರೆಗಳಲ್ಲಿ ಸೇರಿದಂತೆ ಸಾರ್ವಜನಿಕರಿಗೆ ಒಳಪಡುವ ಎಲ್ಲ ಸರ್ಕಾರಿ ಸಂಸ್ಥೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಧಿಕಾರಿಗಳ ಕರ್ತವ್ಯ. ಹಾಗೂ ಸರ್ಕಾರದ ಸವಲತ್ತುಗಳು ಸಮರ್ಪಕವಾಗಿ ಸಾರ್ವಜನಿಕರಿಗೆ ದೊರೆಯದೇ ಇದ್ದಾಗ ಅವುಗಳನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಪರಿಗಣಿಸಿ ಅವುಗಳನ್ನು ದೊರಕಿಸಿಕೊಡುವುದು ಕೂಡ ಅಧಿಕಾರಿಗಳ ಕರ್ತವ್ಯ ಎಂದು ಹೇಳಿದರು.
ರಾಜ್ಯದ ಹಲವು ಪ್ರದೇಶಗಳಲ್ಲಿ ಬಾಣಂತಿ ಹಾಗೂ ಋತುಮತಿಯಾದವರನ್ನು ದೇವರ ಹೆಸರಿನಲ್ಲಿ ಊರಿನಿಂದ ಆಚೆ ಇಡುವ ಪದ್ಧತಿ ಇದೆ. ಮುಖ್ಯವಾಗಿ ಹೆಚ್ಚಿನ ಆರೈಕೆ ಹಾಗೂ ಪೋಷಣೆಯ ಅಗತ್ಯವಿರುವ ಸಂದರ್ಭದಲ್ಲಿ ಮಹಿಳೆಯರನ್ನು ಕುಟುಂಬ ಹಾಗೂ ಊರಿನಿಂದ ದೂರವಿಡುವುದು ಆ ಮಹಿಳೆಯ ನೈಸರ್ಗಿಕ ಹಕ್ಕನ್ನು ಉಲ್ಲಂಘನೆ ಮಾಡಿದಂತೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡುಬAದಲ್ಲಿ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ಇಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಕ್ರಮ ಕೈಗೊಂಡು, ಮಹಿಳೆಯರನ್ನು ರಕ್ಷಿಸಿ ಸೂಕ್ತ ನೆರವು ಒದಗಿಸಬೇಕು. ಇದರೊಂದಿಗೆ ಸಾರ್ವಜನಿಕರಿಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಬೇಕು. ಆಯೋಗಕ್ಕೆ ಸಲ್ಲಿಕೆಯಾಗುವ ಪ್ರತಿಯೊಂದು ದೂರುಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ, ಆಯೋಗಕ್ಕೆ ವರದಿಯನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಾಕಿ ಪ್ರಕರಣಗಳ ವಿಚಾರಣೆ : ಕರ್ನಾಟಕ ರಾಜ್ಯ ಮಾನವ ಹ್ಕಕುಗಳ ಆಯೋಗಕ್ಕೆ ಜಿಲ್ಲೆಯಿಂದ ದಾಖಲಾದ ಒಟ್ಟು ಪ್ರಕರಣಗಳಲ್ಲಿ ಬಾಕಿ ಇದ್ದ 19 ಪ್ರಕರಣಗಳನ್ನು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ವಿಚಾರಣೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದೇ ಸಂದರ್ಭ ಹಾಜರಿದ್ದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಂಬAಧಿಸಿದ ಇಲಾಖೆಗಳಿಗೆ ಕ್ರಮ ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿಗಳಾದ ಎ.ದಿನೇಶ್ ಸಂಪತ್‌ರಾಜ್, ಅಧ್ಯಕ್ಷರ ಆಪ್ತಕಾರ್ಯದರ್ಶಿಗಳಾದ ಅರುಣ್ ಪೂಜಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಹೆಚ್ಚುವರಿ ಎಸ್‌ಪಿ ಹೇಮಂತ್‌ಕುಮಾರ್, ಸೇರಿದಂತೆ ತಹಶೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
Comments are closed.