ರಾಜ್ಯ ಮಾಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಿಂದ ವಿವಿಧ ಶಾಲೆ, ಗ್ರಾ.ಪಂ, ಪೊಲೀಸ್ ಠಾಣೆಗಳಿಗೆ ಭೇಟಿ: ಪರಿವೀಕ್ಷಣೆ
: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಹಾಗೂ ಶೇಖರಗೌಡ ರಾಮತ್ನಾಳರವರು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ಗ್ರಾಮ ಪಂಚಾಯತ, ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರೀವಿಕ್ಷಣೆ ಮಾಡಿದರು.
ಆಯೋಗದ ಸದಸ್ಯರು ಮೊದಲು ಯಲಬುರ್ಗಾ ತಾಲ್ಲೂಕಿನ ಅಟಲ್ ವಾಜಪೇಯ ವಸತಿ ಶಾಲೆ ಹಾಗೂ ಕಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಮಕ್ಕಳ ಸಹಾಯವಾಣಿ-1098ರ ಬಗ್ಗೆ, ಆಯೋಗದ ಕಾರ್ಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಹಾಗೂ ಹಾಜರಿದ್ದ ಅಧಿಕಾರಿಗಳಿಗೆ ಶಾಲಾ ಆವರಣದಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಲವು ಸ್ನಾನಗೃಹ & ಶೌಚಾಲಯಗಳಿಗೆ ಬಾಗಿಲು ಇಲ್ಲದಿರುವುದನ್ನು ಗಮನಿಸಿ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ, ಶೀಘ್ರವೇ ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅದೇ ರೀತಿ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ನಿಮ್ಮ ವ್ಯಾಪ್ತಿಯಲ್ಲಿನ ವಸತಿ ಶಾಲೆಗಳಿಗೆ ಬೀಟ್‌ನ್ನು (ಪೋಲೀಸ್ ಅಧಿಕಾರಿಗಳು ಭೇಟಿ ನೀಡುವುದು) ಹಾಕಿ ನಿಯಮಿತವಾಗಿ ಪರಿಶೀಲನೆ ಮಾಡಲು ಹಾಗೂ ಮಕ್ಕಳಿಗೆ ಜಾಗೃತಿಯನ್ನು ಮೂಡಿಸುವುದರೊಂದಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬಗ್ಗೆ ತಿಳಿಸಬೇಕು ಎಂದರು.
ಬಳಿಕ ಕಲ್ಲೂರು ಗ್ರಾಮ ಪಂಚಾಯತಗೆ ಭೇಟಿ ನೀಡಿ, ದಾಖಲಾತಿಗಳನ್ನು ಪರಿಶೀಲಿಸಿ, ಗ್ರಾಮ ಪಂಚಾಯತನಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಸಭೆಗಳನ್ನು, ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ಆಯೋಜಿಸಿದ್ದು ಹಾಗೂ ಕೈಗೊಂಡ ಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತ್ ಶಿಕ್ಷಣ ಕಾರ್ಯಪಡೆಯನ್ನು ರಚಿಸಿ, ಸಕ್ರಿಯವಾಗಿ ಕಾರ್ಯನಿರ್ವಹಿಸುಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಕನೂರು ಪೊಲೀಸ್ ಠಾಣಿಗೆ ಭೇಟಿ ನೀಡಿ ಮಕ್ಕಳ ಪ್ರಕರಣಗಳ ವಹಿಯನ್ನು ಪರಿಶೀಲಿಸಿ, ಠಾಣೆಯಲ್ಲಿ ಮಕ್ಕಳ ಪರವಾದ ಜಾಗೃತಿ ಗೋಡೆ ಬರಹಗಳನ್ನು ಬರೆಯಿಸಿದ್ದು ಪರಿಶೀಲಿಸಿ ಹರ್ಷ ವ್ಯಕ್ತಪಡಿಸಿದರು. ಪೊಲೀಸ್ ಅಧಿಕಾರಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಿಯಮಿತವಾಗಿ ಆಯೋಜಿಸಿ ಮಕ್ಕಳಿಗೆ ಇಲಾಖೆ ಬಗ್ಗೆ ಇರುವ ಭಯವನ್ನು ನಿವಾರಿಸುವುದರೊಂದಿಗೆಗೆ ಮಕ್ಕಳ ಪರವಾದ ಕಾನೂನುಗಳ ಬಗ್ಗೆ ಮತ್ತು ತುರ್ತು ಸಹಾಯವಾಣಿ 1098/112ರ ಬಗ್ಗೆ ಜಾಗೃತಿಯನ್ನು ಮೂಡಿಸುವಂತೆ ತಿಳಿಸಿದರು.
ಕೊಪ್ಪಳ ತಾಲೂಕಿನ ಹಲಗೇರಿಯ ಸರ್ಕಾರಿ ಶಾಲೆ, ಖಾಸಗಿ ಶಾಲೆಗೆ ಹಾಗೂ ಕೊಪ್ಪಳ ನಗರದ ಸ್ಕ್ಯಾನಿಂಗ್ ಸೆಂಟರ್. ಕ್ರೀಡಾ ವಸತಿ ಶಾಲೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಹಾಂತಸ್ವಾಮಿ ಪೂಜಾರ, ಯಲಬುರ್ಗಾ ತಹಶೀಲ್ದಾರರು, ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಯಲಬುರ್ಗಾ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Comments are closed.