ಕೊಪ್ಪಳ: ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ಜರುಗಿಸಲು ಆಯೋಗದ ಸದಸ್ಯರ ಸೂಚನೆ
ಕೊಪ್ಪಳ ನಗರದಲ್ಲಿ ಕೆಲವು ಅನಧಿಕೃತ ಕೋಚಿಂಗ್ ಸೆಂಟರ್‌ಗಳು ನವೋದಯ, ಮೊರಾರ್ಜಿ ದೇಸಾಯಿ ಶಾಲೆ, ಅದರ್ಶ ವಿದ್ಯಾಲಯ, ಕಿತ್ತೂರು ರಾಣಿ ಚೆನ್ನಮ್ಮ, ಸೈನಿಕ ಶಾಲೆ ಹಾಗೂ ಇತರೆ ವಸತಿ ಶಾಲೆಗಳ ಪ್ರವೇಶಕ್ಕೆ ವಿಶೇಷ ತರಬೇತಿ ನೀಡುವುದಾಗಿ ಪ್ರಚುರಪಡಿಸಿ, ಮಕ್ಕಳನ್ನು ಸೆಳೆದು, ಅತೀ ಹೆಚ್ಚು ಶುಲ್ಕವನ್ನು ಪಡೆಯುತ್ತಿರುವ ಬಗ್ಗೆ ಹಾಗೂ ಕೋಚಿಂಗ್ ಸೆಂಟರ್‌ಗಳು ಯಾವುದೇ ಇಲಾಖೆಯಲ್ಲಿ ನೋಂದಣಿ ಪಡೆಯದೇ ಮಕ್ಕಳಿಗೆ ಯಾವುದೇ ಮೂಲಭೂತ ಸೌಲಭ್ಯಗಳನ್ನು ಒದಗಿಸದೆ, ಅಕ್ರಮವಾಗಿ ನಡೆಯುತ್ತಿವೆ. ಅಲ್ಲದೇ ಕೋಚಿಂಗ್ ಸೆಂಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಹಾರಾತಿಯು ಬೇರೆ ಸರಕಾರಿ/ ಖಾಸಗಿ ಶಾಲೆಯಲ್ಲಿರುತ್ತದೆ. ಈ ರೀತಿಯಲ್ಲಿರುವ ಸಂಸ್ಥೆಗಳ ವಿರುದ್ಧ ಶಿಕ್ಷಣ ಇಲಾಖೆಯು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ. ಈ ಅನಧಿಕೃತ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸುವಂತೆ ವಿವಿಧ ಸಂಘಟನೆಗಳ ಪ್ರಮುಖರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ.ರಾಮತ್ನಾಳ ಅವರಲ್ಲಿ ಮನವಿ ಮಾಡಿರುತ್ತಾರೆ.
ಗಂಗಾವತಿ ನಗರದಲ್ಲಿ ಮಕ್ಕಳ ಭಿಕ್ಷಾಟನೆ ಮಾಡುತ್ತಿರುವ ಹೆಣ್ಣು ಮಕ್ಕಳು ಹೆಚ್ಚಾಗಿ ಕಂಡುಬರುತ್ತಿದ್ದು, ಗ್ಯಾರೇಜ್, ಅಂಗಡಿಗಳು ಮತ್ತು ಇನ್ನಿತರ ವ್ಯಾಪಾರ ವಹಿವಾಟಿನಲ್ಲಿ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ದೂರು ಸಲ್ಲಿಕೆಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಆಯೋಗದ ಸದಸ್ಯರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಕ್ರಮ ವಹಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.
Comments are closed.