ಜುಲೈ 19ರಿಂದ ತುಂಗಭದ್ರಾ ಯೋಜನೆ, ವಿಜಯನಗರ ಕಾಲುವೆಗಳಿಗೆ ನೀರು

Get real time updates directly on you device, subscribe now.

ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನ

 ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ನಿರ್ದೇಶನದ ಮೇರೆಗೆ ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ಜುಲೈ 19ರಿಂದ ನೀರು ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಲ್ ಬಸವರಾಜ್ ಅವರು ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಮುಂಗಾರು-ಹAಗಾಮಿನಲ್ಲಿ ಮಳೆ ತೀವ್ರತೆ ಹೆಚ್ಚು ಇರುವುದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳಹರಿವು ಪ್ರಾರಂಭವಾಗಿರುತ್ತದೆ. ಜುಲೈ 18ರಂದು ತುಂಗಭದ್ರಾ ಜಲಾಶಯದಲ್ಲಿ ಸುಮಾರು 46.80 ಟಿ.ಎಂ.ಸಿಯಷ್ಟು ನೀರು ಸಂಗ್ರಹಣೆಯಾಗಿದ್ದು, ಒಳಹರಿವು ಸುಮಾರು 1 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು. ಇದೇ ಪ್ರಮಾಣದಲ್ಲಿ ಒಳಹರಿವು ಮುಂದುವರೆದಲ್ಲಿ, ಮುಂದಿನ ಒಂದು ವಾರದೊಳಗೆ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇರುತ್ತದೆ. ಪ್ರಯುಕ್ತ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳೊಡನೆ ಚರ್ಚಿಸಿ, ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿರುತ್ತಾರೆ. ಅದರಂತೆ ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ಪಟ್ಟಿಯಲ್ಲಿ ಮುಂದೆ ತೋರಿಸಿದ ಕ್ಯೂಸೆಕ್ಸ್ಗೆ ಅನುಗುಣವಾಗಿ ನೀರು ಹರಿಸಲು ಯೋಜಿಸಲಾಗಿದೆ.
ಕಾಲುವೆಗಳವಾರು ನೀರು ಒದಗಿಸುವ ಕಾಲಾವಧಿ: ಜುಲೈ 19ರಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಸರಾಸರಿ 4100 ಕ್ಯೂಸೆಕ್ಸ್, ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ ಸರಾಸರಿ 25 ಕ್ಯೂಸೆಕ್ಸ್ ಹಾಗೂ ತುಂಗಭದ್ರಾ ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆಗೆ ಸರಾಸರಿ 650 ಕ್ಯೂಸೆಕ್ಸ್ ನೀರು ಹರಿಸಲಾಗುವುದು. ಅದೇ ರೀತಿ ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆಗೆ ಜು.22ರಿಂದ ಸರಾಸರಿ 1300 ಕ್ಯೂಸೆಕ್ಸ್ ನೀರು ಹರಿಸಲಾಗುವುದು. ರಾಯಬಸವಣ್ಣ ಕಾಲುವೆಗೆ ಈಗಾಗಲೇ ಜೂನ್ 01 ರಿಂದ 180 ಕ್ಯೂಸೆಕ್ಸ್ ನಂತೆ ನೀರು ಹರಿಬಿಡಲಾಗುತ್ತಿದೆ. ನದಿ ಪೂರಕ ಸುಮಾರು 1000 ಕ್ಯೂಸೆಕ್ಸ್ ಮತ್ತು ಕಾರ್ಖಾನೆಗಳಿಗೆ 60 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು.
ರೈತಭಾಂದವರಲ್ಲಿ ಮನವಿ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ.
ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಅವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕೃತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತ ಕಚೇರಿಯ  ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!
%d bloggers like this: