ಕಾರ್ಮಿಕ ಅಧಿಕಾರಿಗಳ ದಾಳಿ : ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ
ಜುಲೈ 15 ರಂದು ಮಕ್ಕಳ ಸಹಾಯವಾಣಿ-1098 ಗೆ ಬಂದ ದೂರನ್ನಾಧರಿಸಿ ಕೊಪ್ಪಳ ನಗರದ ಆರ್‌ಟಿಒ ಕಚೇರಿ ಹತ್ತಿರ ನಡೆಸಿದ ತಪಾಸಣೆಯಲ್ಲಿ ಇಬ್ಬರು ಕಿಶೋರ ಕಾರ್ಮಿಕರು ಪತ್ತೆಯಾಗಿದ್ದು, ಅವರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಮಕ್ಕಳ ಸಹಾಯವಾಣಿಗೆ ಬಂದ ದೂರನ್ನಾಧರಿಸಿ ದಾಳಿ ನಡೆಸಿದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಮದಾಪೂರ ಗ್ರಾಮದ ಜಡಿಯಪ್ಪ ಬೀರಪ್ಪ ಸುಣದಾಳ ಹಾಗೂ ಅಡಿವೆಪ್ಪ ನಿಂಗಪ್ಪ ಸಿಂದೊಳ್ಳಿ ಎಂಬುವವರ ಕುರಿ ಹಿಂಡಿನಲ್ಲಿ ಇಬ್ಬರು ಕಿಶೋರ ಕಾರ್ಮಿಕರು ಪತ್ತೆಯಾಗಿದ್ದು, ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಿ 112 ಪೊಲೀಸ್ ಸಿಬ್ಬಂದಿಗಳ ಸಹಕಾರದಿಂದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಸಮಿತಿಯ ನಿರ್ದೇಶನ ಹಾಗೂ ದಾಖಲಾತಿಗಳ ಆಧಾರದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು.
ತಪಾಸಣಾ ತಂಡದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ, ಮಕ್ಕಳ ಸಹಾಯವಾಣಿಯ ಸಂಯೋಜಕರಾದ ಶರಣಪ್ಪ ಸಿಂಗನಾಳ, ವಿಷಯ ನಿರ್ವಾಹಕರಾದ ರಾಘವೇಂದ್ರರಾವ್ ಕುಲಕರ್ಣಿ, 112 ಸಹಾಯವಾಣಿ ಸಿಬ್ಬಂದಿ ಗವಿಸಿದ್ದಪ್ಪ ಕಾಳಿ ಸೇರಿದಂತೆ ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಇತರೆ ಸಿಬ್ಬಂದಿ ಹಾಜರಿದ್ದರು.

Comments are closed.