ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

): 2024-25ನೇ ಸಾಲಿಗಾಗಿ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳ(ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಎಸ್‌ಎಚ್‌ಪಿ ಪೋರ್ಟಲ್‌ನ  https://shp.karnataka.gov.in/     ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 05 ಕೊನೆಯ ದಿನವಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿ ಹಾಗೂ ಎಲ್ಲ ದಾಖಲೆಗಳೊಂದಿಗೆ ಸಂಬAಧಿಸಿದ ವಸತಿ ನಿಲಯಗಳಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು. ವಸತಿ ನಿಲಯಗಳಲ್ಲಿ ಶೇ.75 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳು, ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1 ಲಕ್ಷ ಮೀರಿರಬಾರದು.
ಅರ್ಜಿಯೊಂದಿಗೆ ತಹಶೀಲ್ದಾರರು ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂಕಪಟ್ಟಿ, ಕಾಲೇಜಿನ ಪ್ರವೇಶ ಶುಲ್ಕದ ಪ್ರತಿ ಹಾಗೂ ವಿದ್ಯಾರ್ಥಿಯ ಪಾಸ್‌ಪೋರ್ಸ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳನ್ನು ನಿಗದಿಪಡಿಸಿದ ದಿನಾಂಕದೊಳಗೆ ಸಂಬAಧಿಸಿದ ವಸತಿ ನಿಲಯಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಕೊಪ್ಪಳ, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕೊಪ್ಪಳ, ಯಲಬುರ್ಗಾ, ಗಂಗಾವತಿ ಹಾಗೂ ಹತ್ತಿರದ ವಸತಿ ನಿಲಯಗಳಿಗೆ ಭೇಟಿ ನೀಡಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!