ಜು.20 ರಂದು ಜಿಲ್ಲಾ ಮಟ್ಟದ ದೇವಾಂಗ ಪ್ರತಿಭಾ ಪುರಸ್ಕಾರ

Get real time updates directly on you device, subscribe now.


ಕೊಪ್ಪಳ : ಜಿಲ್ಲಾ ದೇವಾಂಗ ಸಂಘ ಕೊಪ್ಪಳ, ಕೊಪ್ಪಳ ಜಿಲ್ಲಾ ದೇವಾಂಗ ನೌಕರರ ಸಂಘ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾಮಟ್ಟದ ದೇವಾಂಗ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವ ನ್ನು ದಿ. 20.07.2024 ರಂದು ಬೆಳಿಗ್ಗೆ 10.30ಕ್ಕೆ ಭಾಗ್ಯನಗರ ಶ್ರೀ ಬನಶಂಕರಿದೇವಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಶಿವಶಂಕ್ರಪ್ಪ ಚೆನ್ನಿ ಹೇಳಿದರು.
ಅವರು ಗುರುವಾರದಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಸಮಾರಂಭದ ಸಾನಿಧ್ಯವನ್ನು ದೇವಾಂಗ ಪೀಠಾಧ್ಯಕ್ಷರು, ದೇವಾಂಗ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕೊಪ್ಪಳ ಸಂಸದರಾದ ಕೆ. ರಾಜಶೇಖರ ಹಿಟ್ನಾಳ ಉಪಸ್ಥಿತಿಯಲ್ಲಿ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳವರು ದೇವಲ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವರು.
ವಿಶೇಷ ಆಹ್ವಾನಿತರಾಗಿ ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ನೇಕಾರ ಒಕ್ಕೂಟದ ಗೌರವ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ,ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕ ಕಲಬುರ್ಗಿ ರವರು ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಶಿವಶಂಕರಪ್ಪ ಚೆನ್ನಯವರು ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಎಸ್‌.ಎಸ್.ಎಲ್.ಸಿಯ 10 ವಿದ್ಯಾರ್ಥಿಗಳಿಗೆ. ಪಿಯುಸಿಯ 15 ವಿದ್ಯಾರ್ಥಿಗಳಿಗೆ. ಪದವಿಯ 4 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹಾಗೇ ಸರಕಾರಿ ಸೇವೆಯಿಂದ 5 ನೌಕರರನ್ನು ಸನ್ಮಾನಿಸಲಾಗುವುದು. ವಿಶೇಷ ಸೇವೆಯ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಿದ 10 ಸಾಧಕರಿಗೆ ಸನ್ಮಾನಿಸಲಾಗುವುದು. ಸಮಾಜಕ್ಕೆ ಹಾಗೂ ಸಂಘಗಳಿಗೆ ತನು-ಮನ-ಧನದಿಂದ ಸಹಾಯ ಸಹಾಕಾರ ನೀಡಿದ ಮಹನೀಯರಿಗೆ ಗೌರವಿಸಲಾಗುವುದು.
ಜಿಲ್ಲೆಯ ವಿವಿಧ ಗ್ರಾಮದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ದೇವಾಂಗ ಬಂಧು- ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದೇವಾಂಗ ಸಮಾಜದ ತಾಲೂಕು ಅಧ್ಯಕ್ಷ ಸುರೇಶ್ ಮೂರು ಅಂಕಣದ,ಜಿಲ್ಲಾ ಉಪಾಧ್ಯಕ್ಷ ನಾರಾಯಣಪ್ಪ ಕೊಳ್ಳಿ ,ದೇವಾಂಗ ಸಮಾಜದ ಟ್ರಸ್ಟಿ ಚಂದ್ರಕಾಂತ್ ಬೆಟಗೇರಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!