ಯಲಬುರ್ಗಾ ಸ್ನಾತಕೋತ್ತರ ಕೇಂದ್ರ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Get real time updates directly on you device, subscribe now.

: ಕೊಪ್ಪಳ ವಿಶ್ವವಿದ್ಯಾಲಯದ ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳಿಗೆ ಅಗತ್ಯತೆಗನುಸಾರ ಬೋಧನಾಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ, ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ  www.koppaluniversity.ac.in     ಕ್ಕೆ ಭೇಟಿ ನೀಡಬಹುದು ಎಂದು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನರೇಗಾ ಕಾಮಗಾರಿಯಲ್ಲಿ ಕೆಟಿಪಿಪಿ ನಿಯಮದನ್ವಯ ಸಾಮಗ್ರಿ ಖರೀದಿಸಿ : ಸಿಇಒ ರಾಹುಲ್ ರತ್ನಂ ಪಾಂಡೆಯ
ಕೊಪ್ಪಳ ಜುಲೈ 16 (ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಿಸುವ ಕಾಮಗಾರಿಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಕೆಟಿಪಿಪಿ ನಿಯಮಗಳನ್ನು ಅನುಸರಿಸಿ ಖರೀದಿಸಲು ಮಾದರಿ ಟೆಂಡರ್ ಡಾಕ್ಯೂಮೆಂಟ್ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲೆಯ ಎಲ್ಲಾ ಪಂಚಾಯತಿಗಳ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾಮಗಾರಿ ಅನುಷ್ಠಾನದಲ್ಲಿ ಕೆಟಿಪಿಪಿ ಮತ್ತು ಕೆಪಿಪಿಪಿ ನಿಯಮಗಳ ಪಾಲನೆ ಮತ್ತು ಕಾರ್ಯವಿಧಾನವು ಕಾನೂನಿನ ಒಂಭತ್ತು ಅಂಶಗಳಿವೆ ಎಂಬ ವಿಷಯದ ಮೇಲಿನ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಯಾವುದೇ ಯೋಜನೆಗಳು ಪರಿಣಾಮಕಾರಿಯಾಗಿ ಮತ್ತು ಪಾರದರ್ಶಕವಾಗಿ ಅನುಷ್ಠಾನವಾಗಬೇಕಿದ್ದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಾದ ನಾವು ಯೋಜನೆಗಳ ಕಾಯ್ದೆಗಳ ಕುರಿತು, ಮಾರ್ಗಸೂಚಿಗಳ ಕುರಿತು ಸರಿಯಾಗಿ ಅರ್ಥೈಸಿಕೊಂಡು ಯೋಜನೆಗಳನ್ನು ಅನುಷ್ಠಾನ ಮಾಡಲು ಸಾಧ್ಯವಿದೆ. ಅದರಂತೆ ಈ ವಿಷಯಗಳನ್ನು ಸಾರ್ವಜನಿಕರಿಗೆ ಸರಿಯಾಗಿ ತಿಳುವಳಿಕೆ ನೀಡಿದಲ್ಲಿ ಮಾತ್ರ ಪಾರದರ್ಶಕ ಆಡಳಿತ ನೀಡಲು ಸಾಧ್ಯವಾಗುತ್ತದೆ. ಕಾರ್ಯವಿಧಾನವು ಕಾನೂನಿನ ಒಂಭತ್ತು ಅಂಶಗಳನ್ನು ಒಳಗೊಂಡಿರುತ್ತದೆ ಎಂಬ ವಿಷಯಗಳ ಕುರಿತು ಕಛೇರಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಕಾನೂನಿನ ಅರಿವು ಮೂಡಿಸಲು ಪಾರದರ್ಶಕ ಆಡಳಿತ ನೀಡುವ ಉದ್ದೇಶ ಹೊಂದಿರಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಮತ್ತು ತಜ್ಞ ಸಂಪನ್ಮೂಲ ವ್ಯಕ್ತಿಗಳಾದ ಜಿಲ್ಲಾ ಪಂಚಾಯತಿಯ  ಬಳ್ಳಾರಿ ಲೋಕಲ್ ಆಡಿಟ್ ಸರ್ಕಲ್ನ ಆಡಿಟ್ ಅಧಿಕಾರಿ ನಿಸಾರ್ ಅಹ್ಮದ್ ಅವರು  ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ರೂ.5 ಲಕ್ಷ ಮೀರಿದ ಸರಕು ಸಾಮಗ್ರಿಗಳನ್ನು ಖರೀದಿಸಲು ಕೆಟಿಪಿಪಿ ಮತ್ತು ಕೆಪಿಪಿಪಿ ನಿಯಮದಂತೆ ಕ್ರಮವಹಿಸುವುದು ಕಡ್ಡಾಯವಾಗಿರುವುದರಿಂದ ಟೆಂಡರ್ ಅನ್ನು ಆಹ್ವಾನಿಸಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಕುರಿತು ಯೋಜನೆಯಡಿ ಅನುಷ್ಠಾನಿಸುವ ಕಾಮಗಾರಿಗಳಿಗೆ ಗ್ರಾಮ ಪಂಚಾಯತಿಗಳಿAದ ಆಹ್ವಾನಿಸಲಾಗುವ ಟೆಂಡರುಗಳಿಗೆ ಆಯಾ ಪ್ರಾಧಿಕಾರಗಳ ಆರ್ಥಿಕ ಮಿತಿಗಳ ಆಧಾರದಲ್ಲಿ ಆಹ್ವಾನಿಸುವ ಪ್ರಾಧಿಕಾರ, ಪರಿಶೀಲನಾ ಪ್ರಾಧಿಕಾರ, ಅನುಮೋದಿಸುವ ಪ್ರಾಧಿಕಾರ ಹಾಗೂ ಮೇಲ್ಮನವಿ ಪ್ರಾಧಿಕಾರಗಳನ್ನು ನೇಮಿಸುವಂತೆ ಮಾರ್ಗಸೂಚಿಗಳ ಕುರಿತು ತರಬೇತಿಯನ್ನು ನೀಡಿದರು.
ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಎಡಿಪಿಸಿ ಡಿಎಂಐಎಸ್, ಡಿಐಇಸಿ, ಜಿಲ್ಲಾ ಐಇಸಿ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!