ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆ
ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆ
1. ನಮ್ಮ ರಾಜ್ಯದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಪ್ರಮುಖ ಪಾತ್ರವಹಿಸುತ್ತಿರುವ ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ ಎರಡು ಕೋಟಿ ರೂ. ಅನುದಾನ ನೀಡಲಾಗುವುದು. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ ಮಾಡಲಾಗುವುದು.
2. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು.
3. ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ (Balancing reservoir) ನಿರ್ಮಾಣ ಯೋಜನೆಯನ್ನು ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ, ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು.
ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Comments are closed.