ಅವೈಜ್ಞಾನಿಕ ರಸ್ತೆ ಹಂಪ್‌ಗಳನ್ನು ತೆರವುಗೊಳಿಸಿ, ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿ : ಡಿಸಿ ನಲಿನ್ ಅತುಲ್
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ
ಜಿಲ್ಲೆಯಲ್ಲಿನ ರಸ್ತೆಗಳಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಹಂಪ್‌ಗಳಿAದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಮೊದಲು ಅವುಗಳನ್ನು ತೆರವುಗೊಳಿಸಲು ಕ್ರಮ ವಹಿಸಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿದೆ. ಇದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುವುದರ ಜೊತೆಗೆ ಕೆಲವು ಕಡೆಗಳಲ್ಲಿ ಅಪಘಾತಗಳೂ ಸಂಭವಿಸುತ್ತವೆ. ಆದ್ದರಿಂದ ಅಂತಹ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ, ಅದಕ್ಕೆ ಪರ್ಯಾಯವಾಗಿ ವಾಹನಗಳ ವೇಗವನ್ನು ನಿಯಂತ್ರಿಸಲು ಹಾಗೂ ಅಪಘಾತಗಳನ್ನು ತಪ್ಪಿಸಲು ಬ್ಯಾರಿಕೇಡ್‌ಗಳನ್ನು ಅಳವಡಿಸಿ. ಅಗತ್ಯವಿದ್ದಲ್ಲಿ ರಸ್ತೆಯ ವಿನ್ಯಾಸಕ್ಕೆ ಅನುಗುಣವಾಗಿ ರಸ್ತೆ ಉಬ್ಬುಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿ ಎಂದು ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುವ ಪ್ರಮುಖ ಅಪಘಾತ ವಲಯಗಳನ್ನು ಗುರುತಿಸಿ. ಅಪಘಾತಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಪರಿಹಾರ ಕ್ರಮಗಳನ್ನು ಕೈಗೊಂಡು, ಅಪಘಾತಗಳು ಸಂಭವಿಸದAತೆ ಎಚ್ಚರ ವಹಿಸಿ. ನಗರ ಪ್ರದೇಶದಲ್ಲಿ ಲಾರಿಗಳಂತಹ ವಾಹನ ಸಂಚಾರಕ್ಕೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ ಅನಗತ್ಯ ಸಂಚಾರ ದಟ್ಟನೆ ತಪ್ಪಿಸಿ. ಗಂಗಾವತಿ ಮತ್ತು ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಗಂಭೀರ ಸಮಸ್ಯೆಯಾಗಿದ್ದು, ಇದಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ನಗರಸಭೆ ಆಯುಕ್ತರು ಚರ್ಚಿಸಿ ಸೂಕ್ತ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ ಅಗತ್ಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಪ್ರಮುಖ ಹಾಗೂ ಜನನಿಬಿಡ ರಸ್ತೆಗಳಲ್ಲಿ ತಳ್ಳುಗಾಡಿಗಳನ್ನು, ಬೀದಿ ಬದಿ ವ್ಯಾಪಾರಿಗಳನ್ನು ನಿಯಂತ್ರಿಸಬೇಕು. ಬೀದಿ ಬದಿ ವ್ಯಾಪಾರಕ್ಕಾಗಿ ನಿರ್ದಿಷ್ಟ ಸ್ಥಳ ಗುರುತಿಸಿ ಅವರನ್ನು ಸ್ಥಳಾಂತರಿಸಬೇಕು. ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ತಿಳುವಳಿಕೆ ನೀಡಿ ಎಂದು ಅವರು ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳು, ವಾಹನ ಸಂಚಾರ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿ ಶಾಲಾ-ಕಾಲೇಜು ವಾಹನಗಳಿಗೆ ಜಿಪಿಎಸ್ ಅನ್ನು ಕಡ್ಡಾಯವಾಗಿ ಅಳವಡಿಸಬೇಕು. ಈ ಬಗ್ಗೆ ಸಂಬAಧಿಸಿದ ಶಾಲಾ-ಕಾಲೇಜುಗಳಿಗೆ ಅಗತ್ಯ ನಿರ್ದೇಶನ ನೀಡಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಕಂಡುಬAದಲ್ಲಿ ವಾಹನ ವಶಕ್ಕೆ ಪಡೆದು ಪಾಲಕರ ಚಾಲನಾ ಪರವಾನಿಗೆ ರದ್ದುಪಡಿಸಿ, ಸರ್ಕಾರದ ನಿಗದಿಪಡಿಸಿದ ದಂಡವನ್ನು ವಸೂಲಿ ಮಾಡಬೇಕು. ನಗರ ಪ್ರದೇಶದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಹಾಗೂ ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಕಡ್ಡಾಯಗೊಳಿಸಬೇಕು. ಅತಿ ವೇಗದ, ಕರ್ಕಶ ಶಬ್ದ ಉಂಟುಮಾಡುವ ವಾಹನಗಳನ್ನು ವಶಕ್ಕೆ ಪಡೆಯಬೇಕು. ಈ ಬಗ್ಗೆ ಪೊಲೀಸ್ ಇಲಾಖೆಯೊಂದಿಗೆ ಸಾರಿಗೆ ಇಲಾಖೆಯು ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯ ಎಲ್ಲ ಟೋಲ್‌ಗೇಟ್‌ಗಳಲ್ಲಿ ನಿರ್ಮಿಸಿದ ಎಲ್ಲ ಲೇನ್‌ಗಳು ಸಂಪೂರ್ಣವಾಗಿ ಚಿತ್ರೀಕರಣಗೊಳ್ಳುವಂತೆ ಕ್ಯಾಮೆರಾಗಳನ್ನು ಅಳವಡಿಸಬೇಕು. ರಾಷ್ಟಿçÃಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಲ್ಲಲ್ಲಿ ವಾಹನಗಳ ವೇಗ ತಿಳಿಯುವ ಸ್ಪೀಡ್‌ಗನ್, ರಸ್ತೆ ದೀಪಗಳು, ಸಿಸಿ ಕ್ಯಾಮೆರಾವನ್ನು ಸಂಬAಧಿಸಿದ ಪ್ರಾಧಿಕಾರಗಳು ಅಳವಡಿಸಬೇಕು. ನಗರ ಪ್ರದೇಶಗಳಲ್ಲಿ ತಳ್ಳುಗಾಡಿಗಳು, ಗೂಡಂಗಡಿಗಳ ಮೂಲಕ ಸಂಚಾರಕ್ಕೆ ಅಡ್ಡಿಪಡಿಸುವ ಫುಟ್‌ಪಾತ್‌ಳನ್ನು ತೆರವುಗೊಳಿಸಬೇಕು. ಮುಖ್ಯ ರಸ್ತೆಯಲ್ಲಿ ಬಿಡಾಡಿದನಗಳಿಂದ ಉಂಟಾಗುವ ಅಪಘಾತಗಳನ್ನು ತಪ್ಪಿಸಲು ದನಗಳನ್ನು ಗೋಶಾಲೆಗೆ ಸ್ಥಳಾಂತರಿಸಬೇಕು. ಗ್ರಾಮಗಳಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ. ಅಂತಹ ಸ್ಥಳಗಳನ್ನು ಗುರುತಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಿ. ರಸ್ತೆಗಳ ಪ್ರಮುಖ ತಿರುವುಗಳು, ಸಂಪರ್ಕ ರಸ್ತೆಗಳಲ್ಲಿ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಅವರು ಮಾತನಾಡಿ, ನಗರ ಪ್ರದೇಶದಲ್ಲಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಹಾಗೂ ಕಾರು ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಿದೆ. ಜೊತೆಗೆ ನಿರಂತರವಾಗಿ ಚಾಲನಾ ಪರವಾನಗಿ ಪರಿಶೀಲಿಸಿ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗುತ್ತಿದೆ. ಅದರಂತೆ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಅವ್ಯವಸ್ಥೆ ಕುರಿತು ಕ್ರಮ ಕೈಗೊಂಡು ವ್ಯವಸ್ಥಿತ ಪಾರ್ಕಿಂಗ್‌ಗೆ ನಗರಸಭೆ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಎಸ್‌ಪಿ ಹೇಮಂತಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ಹೇಮಂತರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ.ನಾಲವಾರ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.