ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಂ.ಸುಂದರೇಶ ಬಾಬು ಅಧಿಕಾರ ಸ್ವೀಕಾರ
ಕೊಪ್ಪಳ : ಸರ್ಕಾರದ ಆದೇಶದ ಮೇರೆಗೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮೇ 25 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಪಟ್ಟಂತೆ ಹಾಗೂ ವೈಯಕ್ತಿಕವಾಗಿ ಅಧ್ಯಕ್ಷರ ಗಮನಕ್ಕೆ ತರಬೇಕಾದಂತಹ ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳು ಮತ್ತು ಇತರೆ ದಾಖಲೆಗಳನ್ನು ಎಂ.ಸುಂದರೇಶ ಬಾಬು ಭಾ.ಆ.ಸೇ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ, ಬಿ.ಸಿ.ಪಾಟೇಲ್ ಬಡಾವಣೆ, ಹೊಸಪೇಟೆ ರಸ್ತೆ ಕೊಪ್ಪಳ ಈ ವಿಳಾಸಕ್ಕೆ ಕಳುಹಿಸಿಕೊಡಬೇಕು ಎಂದು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.
Comments are closed.