ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ

Get real time updates directly on you device, subscribe now.

:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ವೈದ್ಯಕೀಯ ಶೀಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಮತ್ತು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ 01 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಬ್‌ಸಾಬ್ ದೋಟಿಹಾಳ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿಗಳ ಕಾರ್ಯರ್ಶಿಗಳು ಹಾಘೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ತ್ರಿಲೋಕಚಂದ್ರ್, ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್‌ರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿAಬಾಳ್ಕರ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೆಝಿನ ಪ್ರಾಂಶುಪಾಲರಾದ ಡಾ.ಪ್ರಭುರಾಜ್ ಕೆ.ನಾಯಕ್ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಗಳಾದ ಎನ್.ಎಸ್.ಮಹೇಶ್ ಅವರು ಉಪಸ್ಥಿತರಿರುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನ ಜಾಗೃತಿ ಜಾಥಾ:
ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಸ್ಪತ್ರೆ ಆವರಣದಿಂದ ಜನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

Get real time updates directly on you device, subscribe now.

Comments are closed.

error: Content is protected !!