ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ: ಸಿಇಒ

Get real time updates directly on you device, subscribe now.

: ಜಿಲ್ಲೆಯ ಎಲ್ಲ ಶಾಲೆಗಳಲ್ಲಿಯೂ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ)-2023ರ ಹಾಗೂ ಮಕ್ಕಳ ಹಕ್ಕುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ಮಕ್ಕಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ  ಜಿಲ್ಲಾ ಪಂಚಾಯತ್‌ನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರುಗಳಿಗೆ ಆಯೋಜಿಸಲಾಗಿದ್ದ “ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ)-2023ರ ಹಾಗೂ ಮಕ್ಕಳ ಹಕ್ಕುಗಳ ಕುರಿತು” ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ-2023ರನ್ವಯ ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪೊಲೀಸ್ ಪರಿಶೀಲನೆ ನಡೆಸಬೇಕು. ಸಂಸ್ಥೆಯು ಸಿ.ಸಿ.ಟಿ.ವಿಯ ಕಣ್ಗಾವಲಿನಲ್ಲಿ ಇರಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಗಳಿAದ ಬದ್ಧತಾ ಪತ್ರ ಪಡೆಯಬೇಕು. ಮಕ್ಕಳ ಸಲಹಾ ಪೆಟ್ಟಿಗೆಯನ್ನು ಸ್ಥಾಪಿಸಿ, ಮಕ್ಕಳ ದೂರು, ಸಲಹೆಗಳನ್ನು ಪರಿಗಣಿಸಬೇಕು. ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಬೇಕು. ಶೈಕ್ಷಣಿಕ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಸುರಕ್ಷತಾ ಕ್ರಮಗಳನ್ನು  ಕಡ್ಡಾಯವಾಗಿ ಪಾಲಿಸಲೇಬೇಕು. ತಪ್ಪಿದ್ದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಜರುಗಿಸಲಾಗುವುದು ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಾತನಾಡಿ, ದೇಶದಲ್ಲಿಯೇ ಪ್ರಥಮವಾಗಿ ಮಕ್ಕಳ ಸುರಕ್ಷತಾ ನೀತಿಯನ್ನು ಅನುಷ್ಠಾನಗೊಳಿಸಿದ ರಾಜ್ಯ ಕರ್ನಾಟಕ ರಾಜ್ಯವಾಗಿz.ೆ ಮಕ್ಕಳ ಸುರಕ್ಷತಾ ನೀತಿಯನ್ವಯ ರಾಜ್ಯದಲ್ಲಿನ ಪ್ರತಿ ಮಗುವು ಸುರಕ್ಷಿತ, ರಕ್ಷಣಾತ್ಮಕ ಮತ್ತು ಸಶP್ತÀ ಪರಿಸರದಲ್ಲಿ ಬೆಳೆಯುವುದರೊಂದಿಗೆ, ಮಗುವಿನ ಸರ್ವಾಂಗೀಣ ಅಭಿವೃದ್ದಿಗೆ ಹಾಗೂ ಮಗುವು ತನ್ನ ಸಾಮರ್ಥ್ಯವನ್ನು ತಲುಪಲು ಅವಕಾಶಗಳನ್ನು ಒದಗಿಸುತ್ತದೆ. ಮP್ಕÀಳು ತಮ್ಮ ಹಕ್ಕುಗಳನ್ನು ಅನುಭವಿಸಲು ಮತ್ತು ಆನಂದಿಸಲು ಅನುಕೂಲಕರವಾದ ಪರಿಸರವನ್ನು ನಿರ್ಮಿಸಲು ರಾಜ್ಯದಲ್ಲಿನ ಎಲ್ಲಾ ಭಾಗೀದಾರರು ಅಂದರೆ, ಪೋಷಕರು, ಆರೈಕೆ ಸೇವೆಗಳನ್ನು ನೀಡುವವರು ಮತ್ತು ಸಮುದಾಯ ಒಟ್ಟುಗೂಡಿ ಕೆಲಸ ಮಾಡುವುದರೊಂದಿಗೆ ಮP್ಕÀಳ  ಕುರಿತಾದ ತಾರತಮ್ಯಗಳನ್ನು ನಿವಾರಿಸುವ ಹಾಗೂ ಮP್ಕÀಳ ಭಾಗವಹಿಸುವಿಕೆ, ಸಂಭಾಷಣೆ ಮತ್ತು ಅಭಿಪ್ರಾಯಗಳನ್ನು ಗೌರವಿಸುವುದರೊಂದಿಗೆ ಮಗುವಿನ ಘನತೆಯನ್ನು ಎತ್ತಿ ಹಿಡಿಯುವುದಾಗಿದೆ. ಕರ್ನಾಟಕ ರಾಜ್ಯ ಮP್ಕÀಳ ರಕ್ಷ್ಷÀಣಾ ನೀತಿ (ಕೆಎಸ್‌ಸಿಪಿಪಿ)ಯು ಮP್ಕÀಳ ಅಧಿಪತ್ಯದ ತತ್ವವನ್ನಾಧರಿಸಿದ ಮP್ಕÀಳ ರಕ್ಷಣೆಯ ಒಂದು ಸಮಗ್ರ ಭಾಗವಾಗಿದೆ ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ  ಶೇಖರಗೌಡ ಜಿ ರಾಮತ್ನಾಳ ಅವರು ಮಾತನಾಡಿ, ಭಾರತ ದೇಶವು ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಒಪ್ಪಿ ಸಹಿ ಮಾಡಿರುತ್ತದೆ. ಭಾರತ ಸಂವಿಧಾನದ ಅನುಚ್ಛೇದ 14 (ಸಮಾನತೆಯ ಹಕ್ಕು ಮತ್ತು ಸಮಾನ ರಕ್ಷಣೆಯ ನ್ಯಾಯ) ಅನುಚ್ಛೇದ 15 (3) (ಮಹಿಳೆಯರು ಮತ್ತು ಮP್ಕÀಳಿಗಾಗಿ ವಿಶೇಷ ಅವಕಾಶಗಳನ್ನು ಕಲ್ಪಿಸುವ ರಾಜ್ಯ ಸರ್ಕಾರದ ಮೂಲಭೂತ ಅಧಿಕಾರವನ್ನು ನೀಡಿದೆ). ಅನುZ್ಛÉÃದ 21 (ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರö್ಯ), ಅನುಚ್ಛೇದ 21ಎ (ಶಿP್ಷÀಣದ ಹಕ್ಕು), ಅನುಚ್ಛೇದ 23 ಮತ್ತು 24 (ಶೋಷಣೆಯ ವಿರುದ್ಧದ ಹಕ್ಕುಗಳು), ಮತ್ತು 39 (ಎಫ್) (ಗೌರವದಿಂದ ಬದುಕುವ ಹಕ್ಕು)  ಗಳನ್ನು ನೀಡಲಾಗಿದ್ದು, ಈ ಹಕ್ಕುಗಳನ್ನು ರಕ್ಷಿಸಲು ಮತ್ತು ಅನುಭವಿಸುವಂತಹ ವಾತಾವರಣ ನಿರ್ಮಾಣಕ್ಕಾಗಿ ಸರಕಾರವು “ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತಾ ನೀತಿ-2016”ನ್ನು ಜಾರಿಗೊಳಿಸಿದೆ. ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ: 10208/2018ರಲ್ಲಿ ಮಾನ್ಯ ನ್ಯಾಯಾಲಯವು ನೀಡಿದ ನಿರ್ದೇಶನದಂತೆ ರಾಜ್ಯ ಸರಕಾರವು ನೀತಿಯನ್ನು ಪರಿಷ್ಕರಿಸಿ, ಅನುಷ್ಠಾನಗೊಳಿಸಿ ಆದೇಶಿಸಿರುತ್ತದೆ. ಅದರನ್ವಯ ನೀತಿಯ ಅನುಷ್ಠಾನವನ್ನು ಪ್ರತಿ ಸಂಸ್ಥೆಗಳು ಕಡ್ಡಾಯವಾಗಿ ಮಾಡಲೇಬೇಕು ಎಂದು ತಿಳಿಸುತ್ತಾ, ಮಕ್ಕಳ ಮೇಲಿನ ಯಾವುದೇ ರೀತಿಯ ದೌರ್ಜನ್ಯ, ಹಲ್ಲೆ, ಕಿರುಕುಳದಂತಹ ಘಟನೆಗಳು ವರದಿಯಾದಲ್ಲಿ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ವರದಿಯನ್ನು ದಾಖಲಿಸಿ ಎಂದು ತಿಳಿಸಿದರು. ಸಮುದಾಯದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ಹಲ್ಲೆ, ದೌರ್ಜನ್ಯಗಳು ಮತ್ತು ಬಾಲ್ಯವಿವಾಹಗಳು ಜರುಗುತ್ತಿವೆ. ತನ್ಮೂಲಕ ಮಕ್ಕಳ ಅಭಿವೃದ್ಧಿಗೆ ತಡೆಯನ್ನುಂಟು ಮಾಡುವುದರೊಂದಿಗೆ ಕುಟುಂಬದ ವಿಘಟನೆಗೆ ಕಾರಣವಾಗುತ್ತಿವೆ. ಈ ರೀತಿಯ ಪ್ರಕರಣಗಳನ್ನು ತಡೆಗಟ್ಟಲು ಶಾಲಾ ಹಂತದಲ್ಲಿಯೇ ಮಕ್ಕಳಿಗೆ ತಿಳುವಳಿಕೆಯನ್ನು ನೀಡಬೇಕಾಗಿರುವುದು ಅತ್ಯವಶ್ಯಕವಾಗಿದೆ. ಸಂಪನ್ಮೂಲ ವ್ಯಕ್ತಿಗಳಾದ ತಾವುಗಳೆಲ್ಲರೂ ತಮ್ಮ ಶಾಲೆ ಹಾಗೂ ಸಮುದಾಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿಯನ್ನು ಮೂಡಿಸಿ ಎಂದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳಸ್ನೇಹಿ ವಾತಾವರಣ ನಿರ್ಮಾಣಕ್ಕಾಗಿ ಹಾಗೂ ಜನಸ್ನೇಹಿ ಪೊಲೀಸ್ ಯೋಜನೆಯ ಅಂಗವಾಗಿ ಜಿಲ್ಲೆಯಲ್ಲಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.  ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಪ್ರತಿ ಗುರುವಾರದಂದು ‘ತೆರೆದ ಮನೆ’ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ತಮ್ಮ ಸಂಸ್ಥೆಯ ಮಕ್ಕಳನ್ನು ಹತ್ತಿರದ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಮಕ್ಕಳಿಗೆ ಆತ್ಮವಿಶ್ವಾಸವನ್ನು ವೃದ್ಧಿಸಿ ಎಂದು ತಿಳಿಸಿದರು. ಅಲ್ಲದೇ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ವಿದ್ಯೆಯನ್ನು ನೀಡುವ ವಿದ್ಯಾಲಯಗಳು ಅಧುನಿಕ ಭಾರತದ ದೇವಾಲಯಗಳಿದ್ದಂತೆ. ಇಂತಹ ಸಂಸ್ಥೆಗಳಲ್ಲಿಯೇ, ಅದರ ಸಿಬ್ಬಂದಿಗಳಿAದ ಮಕ್ಕಳ ಮೇಲೆ ಲೈಂಗಿಕ, ದೈಹಿಕ ಹಲ್ಲೆ, ದೌರ್ಜನ್ಯ ಮತ್ತು ಹಿಂಸೆ ನೀಡಿರುವ ಪ್ರಕರಣಗಳು ವರದಿಯಾಗಿವೆ ಮತ್ತು ವರದಿಯಾಗುತ್ತಲೇ ಇವೆ. ಇಂತಹ ಪ್ರಕರಣಗಳನ್ನು ಪೊಲೀಸ್ ಇಲಾಖೆ ಸಹಿಸಿಕೊಳ್ಳುವುದಿಲ್ಲ ಆದ್ದರಿಂದ ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಕ್ರಮವಹಿಸುವುದು ಅವಶ್ಯಕ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಡಾ. ಕೆ.ರಾಘವೇಂದ್ರ ಭಟ್, ಪ್ರಾದೇಶಿಕ ಸಂಯೋಜಕರು, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಅವರು “ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ)-2023ರ ಹಾಗೂ ಮಕ್ಕಳ ಹಕ್ಕುಗಳ ಕುರಿತು ಮತ್ತು ಹರೀಶ ಜೋಗಿ, ವ್ಯವಸ್ಥಾಪಕರು, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳರವರು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಹಾಗೂ ಸುರಕ್ಷಿತ ಅಸುರಕ್ಷಿತ ಸ್ಪರ್ಶ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ,  ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ,  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಡಾ. ಸುಮಲತಾ ಆಕಳವಾಡಿ, ಶಿವಲೀಲಾ ವನ್ನೂರು, ಪ್ರತಿಭಾ, ಪ್ರಶಾಂತ ರಡ್ಡಿ, ಜಿಲ್ಲೆಯ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರುಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: