ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Get real time updates directly on you device, subscribe now.

  ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ 07 ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಷ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ: ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ: 0836-2465490, ಇಲ್ಲಿಗೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಹಾಗೆಯೇ ಈಗಾಗಲೇ “ಬಾಲಗೌರವ ಪ್ರಶಸ್ತಿ” ಪಡೆದವರ ಅರ್ಜಿಗಳನ್ನು ಸಹ ಈ ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಈ ಪ್ರಶಸ್ತಿಯ ಅರ್ಜಿ ನಮೂನೆ/ ಮಾನದಂಡಗಳನ್ನು ಕಚೇರಿಯ ವೆಬ್‌ಸೈಟ್ ಲಿಂಕ್  https://balavikasacademy.karnataka.gov.in/ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: