ಕುಷ್ಟಗಿ: ಫಿಜಿಯೋತೆರೆಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಕುಷ್ಟಗಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದನಿಮಿತ್ತ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯದಿಂದ 2024-25ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಯೋಜನೆಯಡಿ ತೀವ್ರತರನಾದ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋತೆರೆಪಿಸ್ಟ್ರ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಹುವಿಧ ನ್ಯೂನತೆ, ಸೆರೆಬ್ರಲ್ ಪಾಲ್ಸಿ ಹಾಗೂ ಇತರೆ ನ್ಯೂನತೆವುಳ್ಳ ಮಕ್ಕಳಿಗೆ ಫಿಜಿಯೋತೆರೆಪಿ ಚಿಕಿತ್ಸೆ ನೀಡಲು ಅರ್ಹ ಫಿಜಿಯೋತೆರೆಪಿಸ್ಟ್ ನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುವುದು. ಅಂಗಿಕೃತ, ವಿಶ್ವವಿದ್ಯಾಲಯ/ ಶಿಕ್ಷಣ ಸಂಸ್ಥೆಗಳಿಂದ ಬ್ಯಾಚುಲರ್ ಆಫ್ ಫಿಜಿಯೋತೆರೆಪಿ (ಬಿ.ಪಿ.ಟಿ.) ಡಿಪ್ಲೋಮಾ ಇನ್ ಫಿಜಿಯೋತೆರೆಪಿ (ಡಿ.ಪಿ.ಟಿ.) ಈ ವಿಷಯಗಳಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಆಗಸ್ಟ್ 09ರೊಳಗೆ ಕ್ಷೇತ್ರ ಸಮನ್ವಯಾಧಿಕಾರಿಗಳು, ಬಿ.ಆರ್.ಸಿ. ಕೇಂದ್ರ ಗಾಂಧಿನಗರ, ಕುಷ್ಟಗಿ, ಕೊಪ್ಪಳ ಜಿಲ್ಲೆ, ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕುಷ್ಟಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!