ಕೊಪ್ಪಳ ಜಿಲ್ಲೆಯ ವಿವಿಧ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಕೊಪ್ಪಳ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ, ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಮತ್ತು ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳ ಹಿರಿಯ ಶ್ರೇಣಿ ನ್ಯಾಯಾಲಯಗಳ ಅಪರ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗಳಿಗೆ 10 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ಮತ್ತು ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳ ಹಿರಿಯ ಶ್ರೇಣಿ ನ್ಯಾಯಾಲಯಗಳ ಅಪರ ಸರ್ಕಾರಿ ವಕೀಲರ ಹುದ್ದೆಗಳಿಗೆ 7 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ವೈಯಕ್ತಿಕ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು ದ್ವಿಪ್ರತಿಯಲ್ಲಿ ಜಿಲ್ಲಾಧಿಕಾರಿಗಳು, ಕೊಪ್ಪಳ ಇವರ ಕಾರ್ಯಾಲಯಕ್ಕೆ ಕಚೇರಿ ಸಮಯದಲ್ಲಿ ಖುದ್ದಾಗಿ ಅಥವಾ ಅಂಚೆ ಮೂಲಕ ಆಗಸ್ಟ್ 05 ರಿಂದ ಆ.19ರ ವರೆಗೆ ಸಂಜೆ 05.30 ಗಂಟೆಯೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Comments are closed.