ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರ ರಿಯಾಯಿತಿ
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈ ವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.