ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ

ಈ ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೊ) ಸಂ: 26/2022 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಬಸವರಾಜ ಮುದ್ಲಾಪುರ ಇತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 20,000 ಗಳ ದಂಡವನ್ನುಭರಿಸುವಂತೆ ಆದೇಶಿಸಿ, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೊ) ಕುಮಾರ ಡಿ.ಕೆ ಅವರು 2024ರ ಜುಲೈ 30ರಂದು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮದೇಸಾಯಿ ಅವರು ಈ ಪ್ರಕರಣ ನಡೆಸಿ ವಾದ ಮಂಡಿಸಿದ್ದರು ಎಂದು ಹೆಚ್ದುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.