ಯಾಂತ್ರಿಕೃತ ಭತ್ತ ಬಿತ್ತನೆ ಯಂತ್ರ ಚಲಾಯಿಸಿ ರೈತರಿಗೆ ಪ್ರೇರಣೆ ನೀಡಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್
ಕೊಪ್ಪಳ ಜಿಲ್ಲಾ ಪಂಚಾಯತ್, ಗಂಗಾವತಿ ಕೃಷಿ ಇಲಾಖೆ ಹಾಗೂ ಸಿದ್ದಾಪೂರ ರೈತ ಸಂಪರ್ಕ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾದ ಯಾಂತ್ರಿಕೃತ ಭತ್ತ ಬಿತ್ತನೆ ಪ್ರಾತ್ಯಕ್ಷಿಕೆ ಕಾರ್ಯಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 06ರಂದು ಚಾಲನೆ ನೀಡಿದರು.
ಜನಸ್ಪಂದನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿದ್ದಾಪುರ ಗ್ರಾಮದ ಪ್ರವಾಸದಲ್ಲಿದ್ದ ಜಿಲ್ಲಾಧಿಕಾರಿಗಳು, ಭತ್ತ ನಾಟಿ ಮಾಡುವ ಯಂತ್ರವನ್ನು ಖುದ್ದಾಗಿ ಚಲಾಯಿಸಿ, ಭತ್ತದ ಸಸಿಗಳನ್ನು ನಾಟಿ ಮಾಡಿ ರೈತರಿಗೆ ಸ್ಪೂರ್ತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ, ಗಂಗಾವತಿ ಸಹಾಯಕ ಕೃಷಿ ನಿರ್ದೇಶಕರಾದ ಸಂತೋಷ ಅವರು ಸಹ ಭಾಗಿಯಾದರು.
ಈ ವೇಳೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿ ಮತ್ತು ಇನ್ನೀತರರು ಇದ್ದರು.
Comments are closed.