ಸಾರ್ವಜನಿಕರು ಜನಸ್ಪಂದನ‌ ಕಾರ್ಯಕ್ರಮದ ಪ್ರಯೋಜನೆ ಪಡೆಯಿರಿ: ನಲಿನ್ ಕುಮಾರ್ ಅತುಲ್

Get real time updates directly on you device, subscribe now.

ಸಿದ್ದಾಪುರ ಎಪಿಎಂಸಿ ಆವರಣದ ಕಲ್ಯಾಣ ಮಂಟಪದಲ್ಲಿ ಜನ ಸ್ಪಂದನ ಕಾರ್ಯಕ್ರಮ

ಪ್ರತಿಯೊಂದು ಹೋಬಳಿ ನಡೆಯುವ ಜನಸ್ಪಂದನ ಕಾರ್ಯಕ್ರಮದ ಪ್ರಯೋಜನೆಯನ್ನು ಪಡೆಯಿರಿ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಮಾನ್ಯ ಶ್ರೀ ನಲಿನ್ ಕುಮಾರ್ ಅತುಲ್ ಅವರು ಹೇಳಿದರು.

ತಾಲೂಕಿನ ಸಿದ್ದಾಪುರ ಗ್ರಾಮದ ಎಪಿಎಂಸಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸರ್ಕಾರದಿಂದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ಎಲ್ಲಾ ತಾಲೂಕು ಮಟ್ಟದಲ್ಲಿ ಆಯೋಜಿಸುವುದರೊಂದಿಗೆ ಜನರ ಸಮಸ್ಯೆಗಳನ್ನು ಪರಿಹರಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.

ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪಕಾಲದಲ್ಲಿಯೇ ಪರಿಹಾರ ಒದಗಿಸಲಾಗುವುದು. ಅಲ್ಲದೇ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು ಜನರು ಆನ್‌ಲೈನ್ ಮೂಲಕ ಪರಿಶೀಲಿಸಲು ಅನುಕೂಲವಾಗುವಂತೆ ಐ.ಪಿ.ಜಿ.ಆರ್.ಎಸ್ ನಲ್ಲಿ ಅಪ್ಲೋಡ್ ಮಾಡಲಾಗುವುದು. ಇದರಿಂದ ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವುದರ ಜೊತೆಗೆ ಆನ್‌ಲೈನ್ ಮೂಲಕ ಪರಿಶೀಲಿಸಲು ಅನುಕೂಲ ಮಾಡಿಕೊಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಸಾರ್ವಜನಿಕ ಅಹವಾಲುಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತ್ವರಿತವಾಗಿ ಸ್ಪಂಧಿಸುವದರ ಮೂಲಕ ಸಮಸ್ಯಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಕುಮಾರ್ ಅತುಲ್ ಅವರು ಸೂಚನೆ ನೀಡಿದರು.

ಜಿ.ಪಂ ಸಿಇಓ ಅವರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ: ಮಾನ್ಯ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ರತ್ನಂ ಪಾಂಡೇಯ ಅವರು ಜನಸ್ಪಂದನ ಕಾರ್ಯಕ್ರಮ ಆರಂಭದ ಪೂರ್ವದಲ್ಲಿ ಗ್ರಾ.ಪಂ ಪಂಚಾಯತಿಗೆ ಭೇಟಿ ನೀಡಿ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ತಾ.ಪಂ ಇಓ ಲಕ್ಷ್ಮೀದೇವಿ ಯಾದವ್ ಅವರೊಂದಿಗೆ ಮೂಲಭೂತ ಸೌಕರ್ಯಗಳು ಇನ್ನಿತರ ಗ್ರಾಮದ ಸಮಸ್ಯೆಗಳ ಕುರಿತು ಚರ್ಚಿಸಿದರು. ನಂತರ ಗ್ರಾ.ಪಂ‌ ಆವರಣದ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ, ಗ್ರಂಥಾಲಯಕ್ಕೆ ಬರುವ ಮಕ್ಕಳ ಹಾಗೂ ಸಾರ್ವಜನಿಕರ ಹಾಜರಾತಿಯನ್ನು ‌ಪರಿಶೀಲನೆ ಮಾಡಿ,ಮೇಲ್ವಿಚಾರಕರೊಂದಿಗೆ ಸಮಾಲೋಚನೆ ಮಾಡಿದರು ಪರಿಶೀಲನೆ ಮಾಡಿದರು. ನಂತರ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ಗ್ರಾಮದಲ್ಲಿನ ಹಸಿ, ಒಣ ಕಸ ವಿಂಗಡಣೆಯನ್ನು ಘಟಕದಲ್ಲಿ ಪ್ರಾರಂಭಿಸುವಂತೆ ತಿಳಿಸಿದರು. ನಂತರ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಭೋಜನಾಲಯಕ್ಕೆ ಭೇಟಿ ನೀಡಿ, ಬಿಸಿಯೂಟದ ಅಡುಗೆ ಸಹಾಯಕರೊಂದಿಗೆ ಮಕ್ಕಳಿಗೆ ನೀಡುವ ಊಟದ ಮಾಹಿತಿ ಪಡೆದರು. ನಂತರ ಶಾಲಾ ಶೌಚಾಲಯವನ್ನು ಪರಿಶೀಲನೆ ಮಾಡಿ, ಸ್ವಚ್ಚತಾ ಕಾಪಾಡಲು ಕ್ರಮವಹಿಸುವಂತೆ ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ವರಿಷ್ಠಾಧಿಕಾರಿಗಳಾದ ಶ್ರೀ ಡಾ.ರಾಮ್ ಎಲ್. ಅರಸಿದ್ಧಿ, ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಸಿದ್ದರಾಮೇಶ್ವರ, ಉಪವಿಭಾಗಧಿಕಾರಿಗಳಾದ ಕ್ಯಾಪ್ಟೆನ್ ಮಹೇಶ ಮಲಗಿತ್ತಿ, ತಹಶಿಲ್ದಾರರಾದ ಶ್ರೀ ಎಂ.ಕುಮಾರಸ್ವಾಮಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ ಯಾದವ್, ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಿವಗಂಗಮ್ಮ ಪಂಪಾಪತಿ ಭೋವಿ, ಉಪಾಧ್ಯಕ್ಷರಾದ ಗಂಗಪ್ಪ ಸುಂಕದ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.

Get real time updates directly on you device, subscribe now.

Comments are closed.

error: Content is protected !!