ಸಿರಿಧಾನ್ಯಗಳ ಮೌಲ್ಯ ಹಾಗೂ ಅವುಗಳ ಬಳಕೆ ವಿಧಾನ

Get real time updates directly on you device, subscribe now.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಸಿರಿಧಾನ್ಯ ಬಳಕೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮಾನ್ಯ ಯೋಜನಾಧಿಕಾರಿಗಳಾದ   ಜಗದೀಶ್ ಕೆ ಎಚ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಿರಿಧಾನ್ಯಗಳ ಮೌಲ್ಯ ಹಾಗೂ ಅವುಗಳ ಬಳಕೆ ವಿಧಾನದ ಕುರಿತು ತಿಳಿಸಿದರು. ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯ  ವೃದ್ಧಿಯಾಗುವ ಬಗ್ಗೆ ಹಾಗೂ ದಿನನಿತ್ಯದ ಆಹಾರ ಸೇವನೆಯಲ್ಲಿ ಪೌಷ್ಟಿಕಾಂಶ ಯುಕ್ತ ಆಹಾರ ಸೇವನೆ ಮಾಡುವಂತೆ ಸೂಚಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ   ರವೀಂದ್ರ ಇವರು ಮಹಿಳೆಯರು ಮನೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಹಾಗೂ ಕಬ್ಬಿಣ ಅಂಶ ಯುಕ್ತ ಆಹಾರ ಸೇವನೆ ಮಾಡುವಂತೆ ಹಾಗೂ ರಕ್ತಹೀನತೆ ತಡೆಗಟ್ಟುವಲ್ಲಿ ಪೌಷ್ಟಿಕ ಆಹಾರ ಸೇವನೆ ಅತಿ ಮುಖ್ಯ ಎಂದು ತಿಳಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕೇಂದ್ರದ ಸದಸ್ಯರಾದ ಸುಧಾ ಅವರು ಸರ್ವರನ್ನು ಸ್ವಾಗತಿಸಿದರು ಜ್ಞಾನವಿಕಾಸ ಕೇಂದ್ರದ ಸದಸ್ಯರು ಆಸಕ್ತಿಯಿಂದ ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!