Sign in
Sign in
Recover your password.
A password will be e-mailed to you.
ಸಿದ್ದರಾಮಯ್ಯನವರ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಸಂಘಟನೆಗಳಿಂದ ಒತ್ತಾಯ.
ಕೊಪ್ಪಳ: ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬುಧವಾರ ಮನವಿ ಪತ್ರ ಸಲ್ಲಿಸಿ ಕರ್ನಾಟಕದ ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಮತ್ತು ಮುಡಾದಲ್ಲಿ ನಡೆದ ನಿವೇಶನ ಹಂಚಿಕೆಗಳ ಅವ್ಯವಹಾರ ಸಮಗ್ರವಾದ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಇದಕ್ಕೆ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಂಪೂರ್ಣ ಬೆಂಬಲವಿದೆ. ಆದರೆ ರಾಜ್ಯಪಾಲರಾದ ತಾವರ್ ಚಂದ್ ಗೆಹಲೋಟ್ ಇವರು ದೂರುದಾರ ಟಿ.ಜೆ.ಅಬ್ರಾಹಂ ಇವರ ಅರ್ಜಿ ಆಧಾರಿಸಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ನೊಟೀಸ್ ಜಾರಿ ಮಾಡಿದ್ದು, ಸರಿಯಾದ ಕ್ರಮವಲ್ಲ. ಟಿ.ಜೆ.ಅಬ್ರಾಹಂ ಕೊಟ್ಟ ದೂರಿಗೆ ಸಂಬಂಧಿಸಿ, ಸ್ಥಳೀಯ ನ್ಯಾಯಾಲಯವಾಗಲೀ, ಇತರೆ ಯಾವುದೇ ತನಿಖಾ ಸಂಸ್ಥೆಯು ಪ್ರಕರಣವನ್ನು ದಾಖಲಿಸಿಕೊಂಡಿಲ್ಲ ಮತ್ತು ತನಿಖೆ ಕೂಡ ನಡೆಸಿಲ್ಲ. ಖಾಸಗಿ ದೂರಿನ ನೆಪದಲ್ಲಿ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವುದು ಖಂಡನೀಯ.ಸಿದ್ದರಾಮಯ್ಯನವರು ರಾಜ್ಯದ ಬಹುಸಂಖ್ಯಾತ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವುದರೊಂದಿಗೆ ಸಂವಿಧಾನದ ಕನಿಷ್ಠ ಆಶಯಗಳನ್ನು ಎತ್ತಿ ಹಿಡಿದಿದ್ದಾರೆ. ಉದಾಹರಣಗೆ ಸಚಿವ ಸಂಪುಟ ಮತ್ತು ನಿಗಮದ ಅಧ್ಯಕ್ಷರ ಆಯ್ಕೆಯಲ್ಲಿ ಈ ಬೆಳವಣಿಗೆಯನ್ನು ನೋಡಬಹುದು. ಆರೋಗ್ಯ, ಶಿಕ್ಷಣ ಇತರ ಅಭಿವೃದ್ಧಿ ಕಾರ್ಯದಲ್ಲಿ ಹಿಂದುಳಿದ, ಅಲ್ಪಸಂಖ್ಯಾತ, ದಲಿತರು ಸೇರಿದಂತೆ ಬಹುಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳದ ಸಂವಿಧಾನ ವಿರೋಧಿ ಬಿಜೆಪಿ ಶಕ್ತಿಗಳು ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ. ಈಗಾಗಲೇ ದೇಶದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಿ.ಬಿ.ಐ. ಇ.ಡಿ ಇತರೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷದ ಸರಕಾರಗಳನ್ನು ಅಸ್ಥಿರಗೊಳಿಸುವ ಕಾರ್ಯ ನಿರಂತರವಾಗಿ ಮಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರನ್ನು ಈಗಲೂ ಜೈಲಿನಲ್ಲಿ ಇಡಲಾಗಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ ಬಿಸ್ವಾಸ್ ಇವರನ್ನು ಕೂಡ ಜೈಲಿಗೆ ಹಾಕಲಾಗಿತ್ತು. ಸದ್ಯ ಇವರು ಬೇಲ್ ಮೇಲೆ ಹೊರಗಡೆ ಬಂದು ಪುನಃ ಮುಖ್ಯಮಂತ್ರಿ ಹುದ್ದೆಯನ್ನು ನಿಭಾಯಿಸುತ್ತಿದ್ದಾರೆ. ಇದೇ ರೀತಿ ಕರ್ನಾಟಕದ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಿ, ಸಿದ್ದರಾಮಯ್ಯ ಸರಕಾರವನ್ನು ಉರುಳಿಸುವ ಕುತಂತ್ರವನ್ನು ರಾಜ್ಯದ ಜನರು ಸಹಿಸಿಕೊಳ್ಳುವುದಿಲ್ಲ. ಮಹಾರಾಷ್ಟ್ರದ ಎನ್.ಸಿ.ಪಿ ಮುಖಂಡ ಅಜಿತ ಪವಾರ್ ನೂರಾರು ಕೋಟಿ ಭ್ರಷ್ಟಾಚಾರ ನಡೆಸಿದ ವ್ಯಕ್ತಿಯನ್ನು ಬಿಜೆಪಿ ತನ್ನ ಪಕ್ಷಕ್ಕೆ ಸೇರಿಸಿಕೊಂಡು ಅಜಿತ ಪವಾರ್‌ಗೆ ಕ್ಲೀನ್ ಚೀಟ್ ಕೊಡಲಾಗಿತ್ತು. ಇದೇ ರೀತಿ ದೇಶದಾದ್ಯಂತ ಭ್ರಷ್ಟರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಿಜೆಪಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಯಾವ ನೈತಿಕತೆಯೂ ಇಲ್ಲ.ತಾವುಗಳು ಮೇಲಿನ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕರ್ನಾಟಕದ ರಾಜ್ಯಪಾಲರನ್ನು ವಿನಂತಿಸಿಕೊಳ್ಳುತ್ತೇವೆ. ವಾಪಸ್ ಕರೆಯಿಸಿಕೊಳ್ಳುವ ಕಾರ್ಯಕ್ಕೆ ಮುಂದಾಗಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು. ಕರ್ನಾಟಕ ರೈತ ಸಂಘ (ಎಐಕೆಕೆಎಸ್) ರಾಜ್ಯಾಧ್ಯಕ್ಷ ಡಿ.ಹೆಚ್.ಪೂಜಾರ್. ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ (ಎಐಟಿಯುಸಿ)ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ್. ಟಿಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಬಿ.ಗೋನಾಳ. ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ನರೇಗಲ್. ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್. ಕೊಳಚೆ ನಿರ್ಮೂಲನಾ ವೇದಿಕೆಯ ಜಿಲ್ಲಾ ಸಂಚಾಲಕ ತುಕಾರಾಮ್ ಬಿ. ಪಾತ್ರೋಟಿ. ಪಾಸ್ಟರ್ಸ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ. ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಾಫರ್ ಕುರಿ. ನಾಗರಾಜ್ ಭೋವಿ ಹಿರೇ ಬಗನಾಳ. ಸಾಧಿಕ್ ಅಲಿ ದಫೆದಾರ್. ಸಫಾಯಿ ಕರ್ಮಚಾರಿ ನಾಮ ನಿರ್ದೇಶಿತ ಸದಸ್ಯ ಕಾಶಪ್ಪ ಚಲವಾದಿ. ಅಲೆಮಾರಿ ಸಂಘಟನೆ ಜಿಲ್ಲಾ ಅಧ್ಯಕ್ಷ ಸಂಜಯ್ ದಾಸ್ ಕೌಜಗೇರಿ. ರಾಮಲಿಂಗಯ್ಯ ಶಾಸ್ತ್ರಿ ಮಠ. ನಿಂಗು ಜಿ. ಬೆಣಕಲ್ ಮುಂತಾದವರು ಭಾಗವಹಿಸಿದ್ದರು.
Get real time updates directly on you device, subscribe now.
Comments are closed.