ಜಿಲ್ಲೆಯ ಆದ್ಯತಾ ಪ್ರವಾಸಿ ತಾಣಗಳ ಆಯ್ಕೆಗೆ ವೋಟ್ ಮಾಡಿ

Get real time updates directly on you device, subscribe now.

“ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್-2024’’ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆಗಾಗಿ ವೋಟ್ ಮಾಡುವಂತೆ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಈ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದಲ್ಲಿ ಪ್ರಚಾರ ಕೈಗೊಳ್ಳುವ ಸಂಬಂಧ ಕರುನಾಡಿನ ಕೊಪ್ಪಳ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಧಾರ್ಮಿಕ, ಸಾಂಸ್ಕೃತಿಕ ಪರಂಪಾರಿಕ ನೈಸರ್ಗಿಕ ವನ್ಯಜೀವಿಗಳು ಜಲಪಾತಗಳು ಸಾಹಸ ಪರಿಸರ ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜನ ನೀಡಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ ವಿಶ್ವ ದರ್ಜೆಗೇರಿಸಲು ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ “ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್-2024” ಎಂಬ ಶಿರೋನಾಮೆಯಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.
ಈ ಕಾರ್ಯಕ್ರಮದ ಭಾಗವಾಗಿ ಯುವಕರು, ಹಿರಿಯ ನಾಗರೀಕರು ಹಾಗೂ ಪ್ರವಾಸಿಗರು ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳನ್ನು ಆಯ್ಕೆಗೊಳಿಸಲು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲೆಯ ಪ್ರವಾಸಿ ತಾಣಗಳಾದ ಆನೆಗುಂದಿ ಕೋಟೆ, ಅಂಜನಾದ್ರಿ ಬೆಟ್ಟ, ಗವಿಮಠ, ಹುಲಿಗೆಮ್ಮ ದೇವಿ ದೇವಸ್ಥಾನ, ಹುಲಿಕೆರೆ, ಕಬ್ಬರಗಿ ಫಾಲ್ಸ್, ಕನಕಾಚಲಪತಿ ದೇವಸ್ಥಾನ, ಕಿನ್ನಾಳ ಕಲೆ, ಕುಕನೂರು ಮಹಾಮಾಯ ದೇವಸ್ಥಾನ, ನವಬೃಂದಾವನ ಮತ್ತು ಪಂಪಾಸರೋವರ ಈ ತಾಣಗಳಿಗೆ  https://innovateindia.mygov.in/dekho-apna-desh/ ಲಿಂಕ್‌ನಲ್ಲಿ 2024ರ ಸೆಪ್ಟಂಬರ್ 15 ರೊಳಗಾಗಿ ವೋಟ್  ಮಾಡುವಂತೆ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!