ವಿದೇಶಿ ಹಣ್ಣಿನ ಸಸಿಗಳ ಪರಿಚಯ, ಮಾರಾಟ ಪ್ರದರ್ಶನ, ಮಾರಾಟ ಮೇಳ
ಆಗಸ್ಟ್ 15 ರಿಂದ ಕೊಪ್ಪಳದಲ್ಲಿ ಸಸ್ಯ ಸಂತೆ, ತೋಟಗಾರಿಕಾ ಅಭಿಯಾನ ಕಾರ್ಯಕ್ರಮ
ಕೊಪ್ಪಳ ತೋಟಗಾರಿಕಾ ಇಲಾಖೆ ವತಿಯಿಂದ ತೋಟಗಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದ ಉತ್ಕೃಷ್ಟ ಗುಣಮಟ್ಟದ ಸಸಿಗಳ ಮಾರಾಟದ “ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ’’ “ವಿದೇಶಿ ಹಣ್ಣಿನ ಸಸಿಗಳ ಪರಿಚಯ ಹಾಗೂ ಮಾರಾಟ ಪ್ರದರ್ಶನ ಮತ್ತು ಮಾರಾಟ ಮೇಳ-2024’’ ನ್ನು ಆಗಸ್ಟ್ 15ರಿಂದ ಆಗಸ್ಟ್ 20ರವರೆಗೆ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವು ಆಗಸ್ಟ್ 15ರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸೇನ್ ಸಾಬ್ ನಬೀಬ್ ಸಾಬ್ ದೋಟಿಹಾಳ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ಬೆಂಗಳೂರು ಲಾಲ್ ಬಾಗ್ ತೋಟಗಾರಿಕೆ ನಿರ್ದೇಶಕರಾದ ಡಿ.ಎಸ್ ರಮೇಶ, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ, ಬೆಂಗಳೂರು ಲಾಲ್ ಬಾಗ್ ಕ್ಷೇತ್ರ ಮತ್ತು ನರ್ಸರಿ ಹಾಗೂ ತಾಳೆ ಬೆಳೆ ಯೋಜನೆಯ ಅಪರ ನಿರ್ದೇಶಕರಾದ ಕೆ.ಎನ್.ಪರಶಿವಮೂರ್ತಿ, ತೋಟಗಾರಿಕೆ ಅಪರ ನಿರ್ದೇಶಕರು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿಗಳಾದ ಕೆ.ಬಿ ದುಂಡಿ, ಕಲಬುರಗಿ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕರಾದ ಮಂಜುನಾಥ ನಾರಾಯಣಪುರ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ ಎನ್.ತಮ್ಮಯ್ಯ, ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳುಗಳಾದ ಡಾ ಎಂ.ವಿ.ರವಿ, ಕೊಪ್ಪಳ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶಿವಣ್ಣ ಮೂಲಿಮನಿ ಅವರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಕೊಪ್ಪಳದ ತೋಟಗಾರಿಕೆ ಉಪ ನಿರ್ದೇಶಕರಾದ ಕೃಷ್ಣ ಸಿ ಉಕ್ಕುಂದ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಜೆ.ಶಂಕರಪ್ಪ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿರುವರು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.
Comments are closed.