ಅಣೆಕಟ್ಟು ವಿಚಾರದಲ್ಲಿ ರಾಜಕೀಯ ಸಲ್ಲ: ಸಚಿವ ತಂಗಡಗಿ

Get real time updates directly on you device, subscribe now.

ಹೊಸಪೇಟೆ:   ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದಿರುವ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿರುವುದು ಸರಿಯಲ್ಲ? ಡ್ಯಾಮ್ ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎಂಬುದನ್ನು ಬಿಜೆಪಿಗರು ತಿಳಿದುಕೊಳ್ಳಲಿ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಬಿಜೆಪಿಗರ ವಿರುದ್ಧ ಕಿಡಿಕಾರಿದ್ದಾರೆ.

ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಬಗ್ಗೆ ಮಾಡುತ್ತಿರುವ ಆರೋಪಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಸಚಿವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿರುವುದು ನೋವು ತರಿಸಿದೆ. ಜಗದೀಶ್ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ. ಇಂತಹವರು ಈ ರೀತಿಯಾದಂತಹ ಹೇಳಿಕೆ ನೀಡುವುದು ಸರಿಯಲ್ಲ. ನಾವು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಾ ಹೋದರೆ ಟಿಬಿ ಡ್ಯಾಂ ಯಾರ ಅಧೀನದಲ್ಲಿದೆ ಎಂದು ಹೇಳಲಿ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಣೆಕಟ್ಟೆಯ ನಿರ್ವಹಣೆಗೆ ಪ್ರತಿ ವರ್ಷ ಬೇಕಾದಷ್ಟು ಹಣವನ್ನು ರಾಜ್ಯ ಸರ್ಕಾರ ಒದಗಿಸುತ್ತಿದೆ. ನಾವು ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಹೋದರೆ ಅದು ರಾಜಕೀಯವಾಗುತ್ತದೆ. ನನಗೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಇಷ್ಟವಿಲ್ಲ. ರೈತರ ಹಿತ ಕಾಪಾಡುವುದು ಹಾಗೂ ಅಣೆಕಟ್ಟೆಯನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆ ಎಂದರು.

ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಜನಾರ್ದನ್ ರೆಡ್ಡಿ ಅವರು ಇನ್ನಿಲ್ಲದ ಆರೋಪ ಮಾಡುತ್ತಿದ್ದಾರಲ್ಲ, ಈಗಲೂ ಕಾಲ ಮಿಂಚಿಲ್ಲ ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ಅಣೆಕಟ್ಟು ನಿರ್ವಹಣೆಗೆ ಒಂದು ತಂಡ ರಚಿಸುವಂತೆ ಕೇಳಲಿ. ಅದನ್ನು ಬಿಟ್ಟು ಅಣೆಕಟ್ಟು ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಮನವಿ ಮಾಡಿದರು.

Get real time updates directly on you device, subscribe now.

Comments are closed.

error: Content is protected !!