ಪ್ರವಾಸಿ ಮಾರ್ಗದರ್ಶಿ ತರಬೇತಿ: ಅರ್ಜಿ ಆಹ್ವಾನ

Get real time updates directly on you device, subscribe now.

ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನ ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಹಿಂದುಳಿದ/ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಹಾಗೂ ಪ್ರಚಾರಪಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ದೇಶಿಯ-ವಿದೇಶಿಯ ಪ್ರವಾಸಿಗರಿಗೆ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಸಾಹಿತ್ಯಕ್ಕೆ, ಸಾಂಸ್ಕೃತಿಕ ಹಾಗೂ ಕಲಾವೈವಿದ್ಯತೆಗಳನ್ನು ಒಳಗೊಂಡ ಸೃಜನಶೀಲತೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲು ಅಂದರೆ `ಒಂದು ರಾಜ್ಯ ಹಲವು ವಿಸ್ಮಯಗಳು’ ಎಂಬುದನ್ನು ಪರಿಚಯಿಸಲು ಪ್ರವಾಸಿ ಮಾರ್ಗದರ್ಶಿ ತರಬೇತಿಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಯು  ಸಾಮಾನ್ಯ, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರಿಗೆ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ವಿಧವೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 48 ವರ್ಷ ವಯೋಮಿತಿಯಲ್ಲಿರಬೇಕು. ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆ, ಕೊಪ್ಪಳ ಕಛೇರಿಯಿಂದ ಪಡೆದು ಭರ್ತಿ ಮಾಡಿ, ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು  ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಜಿಲ್ಲೆ-583231, ಈ ವಿಳಾಸಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!