ದುರಸ್ತಿ ಕಾರ್ಯ ಪರಿಹಾರ ವಿತರಣೆಗೆ ಗಮನ ಹರಿಸಿ ಜೆಡಿಎಸ್ ನಾಯಕರ ಒತ್ತಾಯ
‘
ಮುನಿರಾಬಾದ್: ಕೇಂದ್ರ ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುವುದನ್ನು ನಿಲ್ಲಿಸಿ ಈ ಕ್ಷಣದಿಂದಲೇ ರೈತರಿಗೆ ಪರಿಹಾರ ವಿತರಣೆ ಹಾಗೂ ಕ್ರಸ್ಟ್ ಗೇಟ್ ದುರಸ್ತಿಯನ್ನು ಕೈಗೊಳ್ಳಬೇಕೆಂದು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.
ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ್ರು, ಶಾಸಕರಾದ ಕೆರೆಮ್ಮ ನಾಯಕ್, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ, ಮಾಜಿ ಶಾಸಕರಾದ ರಾಜ ವೆಂಕಟಪ್ಪ ನಾಯಕ್, ಜೆಡಿಎಸ್ ರಾಜ್ಯ ಯುವ ಘಟಕದ ಕಾರ್ಯಧ್ಯಕ್ಷ ರಾಜು ನಾಯಕ್ ಹಾಗೂ ಮುಖಂಡರು ಇಂದು ತುಂಗಭದ್ರಾ ಅಣೆಕಟ್ಟೆಯಲ್ಲಿ ಕೊಚ್ಚಿ ಹೋಗಿರುವ ಕ್ರಸ್ಟ್ ಗೇಟ್ಸ್ ಸ್ಥಳದ ಪರಿಶೀಲನೆ ನಡೆಸಿದರು.
ಕ್ರಸ್ಟ್ ಗೇಟ್ ಕೊಚ್ಚಿ ಹೋದ ನಂತರ ಆಗಿರುವ ಬೆಳವಣಿಗೆ ಕುರಿತು ಚರ್ಚಿಸಿದರು.
“ರಾಜ್ಯ ಸರಕಾರ ಅಣೆಕಟ್ಟು ನಿರ್ವಹಣೆಗಾಗಿನ ಸಭೆಯನ್ನು ಬೆಂಗಳೂರಿನಲ್ಲಿ ಮಾಡಿದ್ದು ನೈತಿಕವಾಗಿ ತಪ್ಪು. ಮಳೆಗಾಲದಲ್ಲಿ ಅಣೆಕಟ್ಟನ್ನು ಸರಿಯಾಗಿ ಪರಿಶೀಲನೆ ಮಾಡದಿರುವುದು ಅಕ್ಷಮ್ಯ ಅಪರಾಧ. ಅಣೆಕಟ್ಟು ನಿರ್ವಹಣೆ ರಾಜ್ಯ ಸರ್ಕಾರದ ಜವಾಬ್ದಾರಿ. ಇದರಲ್ಲಿ ಕೇಂದ್ರ ಸರಕಾರವನ್ನು ದೋಷಿಸಿ ಪ್ರಯೋಜನವಿಲ್ಲವೆಂದು ವೆಂಕಟರಾವ್ ನಾಡಗೌಡ್ರ ಹೇಳಿದರು.
ಈಗಾಗಲೇ ರೈತರಿಗೆ ಒಂದು ಹೆಕ್ಟರಿಗೆ 50,000 ಪರಿಹಾರ ಘೋಷಿಸಬೇಕೆಂದು ಮೈತ್ರಿ ಪಕ್ಷಗಳು ಒತ್ತಾಯಿಸಿವೆ. ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಸರಕಾರ ಈ ಕೂಡಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಸಿ ವಿ ಚಂದ್ರಶೇಖರ ಹೇಳಿದರು.
ಮುಖಂಡರಾದ ರಾಜಾ ವೆಂಕಟಪ್ಪ ನಾಯಕ ಅವರು ರಾಜ್ಯ ಸರಕಾರ ಶುಲ್ಲಕ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ದುರಸ್ತಿ ಕಾರ್ಯ ಕೈಗೊತ್ತಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ವಿರೇಶಗೌಡ ಚಿಕ್ಕ ಬಗನಾಳ, ಮೂರ್ತೆಪ್ಪ ಗಿಣಗೇರಿ, ಯಮನಪ್ಪ ಕಟಿಗಿ, ರಮೇಶ ಕುಣಕೇರಿ, ಶ್ರೀನಿವಾಸ ಪೂಜಾರ, ಸಿದ್ದನಗೌಡ ಚಿಕ್ ಬಗನಾಳ, ಶರಣಪ್ಪ ಜಡಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
Comments are closed.