ನಾಗಪುರ ದೀಕ್ಷಾ ಭೂಮಿಗೆ ತೆರಳಲು ಅಂಬೇಡ್ಕರ್ ಅನುಯಾಯಿಗಳಿಗಳಿಂದ ಅರ್ಜಿ ಆಹ್ವಾನ ———-
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ತೆರಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಾತ್ರೆಗೆ ತೆರಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ hattps://swdservices. Karnataka.gov.in ನ ಮೂಲಕ ಆಗಸ್ಟ್ 15 ರಿಂದ ಆ.31 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 80 ಗುರಿ ನಿಗದಿಯಾಗಿದ್ದು, ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಜೇಷ್ಠತೆ ಹಾಗೂ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿದವರಾಗಿರಬೇಕು. ಎಸ್. ಸಿ/ಎಸ್.ಟಿ ಸಮುದಾಯದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು. ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಅಂಬೇಡ್ಕರ್ ಅವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರಿ ವೆಚ್ಚದಲ್ಲಿ ಒಮ್ಮೆ ನಾಗಪೂರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಈ ಸೌಲಭ್ಯಕ್ಕೆ ಅರ್ಹರಲ್ಲ. ಸರ್ಕಾರಿ ಮತ್ತು ಅಂಗಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ, ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ ನಾಗಪೂರಕ್ಕೆ ಹೋಗಿಬರಲು ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸುವುದು. ವಸತಿ ಮತ್ತು ಭೋಜನ ವೆಚ್ಚವನ್ನು ಯಾತ್ರಾರ್ಥಿಗಳೇ ಹರಿಸಬೇಕು. ಈ ಎಲ್ಲಾ ಅರ್ಹತೆಗಳನ್ನು ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆರವರನ್ನು ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾತ್ರೆಗೆ ತೆರಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ hattps://swdservices.

Comments are closed.