ಆಗಸ್ಟ್ 31 ರಂದು ರಾಜ್ಯ ಹೋಟೆಲ್ ಮಾಲೀಕರ ಸಂಘದ ಸಮ್ಮೀಲನ : ಜಿ.ಕೆ.ಶೆಟ್ಟಿ
ಕೊಪ್ಪಳ : ರಾಜ್ಯ ಹೋಟೆಲ್ ಮಾಲೀಕರ ಸಂಘದ ಸಮ್ಮೀಲನ ಆಗಸ್ಟ್ 31ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಜರುಗುವುದು ಎಂದು ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಹೇಳಿದರು.
ಅವರು ನಗರದ ಫಾರ್ಚುನ್ ಹೋಟೆಲ್‌ನಲ್ಲಿ ಕೊಪ್ಪಳ ಜಿಲ್ಲೆಯ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು,ಸದಸ್ಯರನ್ನು ಉದ್ದೇಶಿಸಿ ಮಾತನಾಡಿ ಅಂದು ಕಾರ್ಯಕ್ರಮವನ್ನು ಸಚಿವರಾದ ಎಂ.ಬಿ ಪಾಟೀಲ್ ಉದ್ಘಾಟಿಸುವರು,ಮುಖ್ಯ ಅತಿಥಿಗಳಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ಸೇರಿದಂತೆ ಅನೇಕರು ಪಾಲ್ಗೊಳ್ಳುವರು, ಸಮ್ಮೀಲನ ಯಶಸ್ವೀಗೊಳಿಸಲು ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ಸಭೆ ನಡೆಸುತ್ತಿದ್ದು ಈ ಸಮ್ಮೀಲನಕ್ಕೆ ಕೊಪ್ಪಳ ಜಿಲ್ಲೆಯಿಂದ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ನಂತರ ರಾಜ್ಯ ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ಮಧುಕರ್ ಶೆಟ್ಟಿ ಮಾತನಾಡಿ ಸಂಘ 70 ವರ್ಷದಿಂದ ನಡೆದುಕೊಂಡು ಬಂದಿದ್ದು ,ಈ ಸಂಘ ಬೆಂಗಳೂರಿಗೆ ಸೀಮಿತವಾಗಬಾರದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಿ ಸಂಘ ಬಲವರ್ಧನೆಗೊಳ್ಳಬೇಕು ಸದಸ್ಯರ ಸಂಖ್ಯೆ ಹೆಚ್ಚು ಆದಾಗ ಸರ್ಕಾರಕ್ಕೆ ಬೇಡಿಕೆಗಳನ್ನು ಇಡಲು ಸಾಧ್ಯವಾಗುತ್ತದೆ,ಬಾಂಧವ್ಯ ವೃದ್ಧಿಗೊಳ್ಳಲು ಸಂಘ ಅವಶ್ಯವಾಗಿದ್ದು ಜಿಲ್ಲೆಯಲ್ಲಿ ಸದಸ್ಯರ ಸಂಖ್ಯೆ ಹೆಚ್ಚು ಹೆಚ್ಚು ಆದಾಗ ಸಂಘಕ್ಕೆ ಬಲಿಷ್ಠ ಶಕ್ತಿ ಬರುತ್ತದೆ ,ಇದು ಹಿರಿಯರು ಕಟ್ಟಿ ಬೆಳೆಸಿದ ಸಂಘವಾಗಿದ್ದು,ಹುಬ್ಬಳ್ಳಿಯಲ್ಲಿ ನಡೆದ ಸಮ್ಮೇಳನದಲ್ಲಿ ಸುಮಾರು 25 ಸಾವಿರ ಜನ ಪಾಲ್ಗೊಂಡು ಯಶಸ್ವಿಗೊಳಿಸಿದರು,ಮುಂದೆ ರಾಜ್ಯದ ಯಾವುದಾದರೂ ಜಿಲ್ಲೆಯಲ್ಲಿ ರಾಜ್ಯ ಸಮ್ಮೇಳನ ನಡೆಸಲಾಗುವುದು ಎಂದರು.
ಕೊಪ್ಪಳ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಶಿಕರ ಶೆಟ್ಟಿ ಮಾತನಾಡಿ ಕೊಪ್ಪಳ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸುವುದಾಗಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.
ಸನ್ಮಾನ : ಕೊಪ್ಪಳ ಜಿಲ್ಲೆಗೆ ಆಗಮಿಸಿದ ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಹಾಗೂ ಉಪಾಧ್ಯಕ್ಷ ಮಧುಕರ್ ಶೆಟ್ಟಿ ಅವರನ್ನು ಕೊಪ್ಪಳ ಜಿಲ್ಲಾ ಹೋಟೆಲ್ ಮಾಲೀಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶೇಖರ್ ನಾಯ್ಡು, ,ಶ್ರೀನಿವಾಸ್ ಶೆಟ್ಟಿ,ವಿಜಯ್ ಶೆಟ್ಟಿ ,ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ್ ಸೇರಿದಂತೆ ಕೊಪ್ಪ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು,
Comments are closed.