ಚೈಲ್ಡ್ ಸಪೋರ್ಟ್ ಫೌಂಡೇಶನ್ ಹಾಗೂ ಧ್ವನಿ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವ

Get real time updates directly on you device, subscribe now.

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ನರೆಗಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಚೈಲ್ಡ್ ಸಪೋರ್ಟ್ ಫೌಂಡೇಶನ್ ಹಾಗೂ ಧ್ವನಿ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಮಕ್ಕಳು ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನೆ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಒಂದು ಕಾರ್ಯಕ್ರಮದ ಪ್ರಾಸ್ತಾವಿಕ ಮಾತುಗಳನ್ನು ದೈಹಿಕ ಶಿಕ್ಷಕರಾದ ಶರಣಪ್ಪ ಅವರು ಮಾತನಾಡಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಸುಂಕಪ್ಪ ಮೀಸಿ SDMC ಸದಸ್ಯರು ಮಾತನಾಡಿದರು.ಧ್ವನಿ ಸಂಸ್ಥೆ ಹಾಗೂ ಚೈಲ್ಡ್ ಸಪೋರ್ಟ್ ಪೌಂಡೇಶನ್ ನಿಂದ ಶಾಲೆಯ ಮುಖ್ಯೋಪಾಧ್ಯಾಯರಿಗೆ ನೆನಪಿನ ಕಾಣಿಕೆಯನೋಡಲಾಯಿತು.ನಂತರ ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಸರ್ವ ಸದಸ್ಯರು ಅಧ್ಯಕ್ಷರು ಹಾಗೂ ಊರಿನ ಮಹಿಳೆಯರು ಸಂಘದ ಮಹಿಳೆಯರು ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದ ಸಹ ಶಿಕ್ಷಕರುಗಳು ಭಾಗವಹಿಸಿ ಯಶಸ್ವಿಗೊಳಿಸಿದರು.

Get real time updates directly on you device, subscribe now.

Comments are closed.

error: Content is protected !!