ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ

Get real time updates directly on you device, subscribe now.

ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಕಚೇರಿಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಆಗಸ್ಟ್ 15ರಂದು ಉದ್ಘಾಟಿಸಿದರು.
ಪೂರ್ವ ನಿಗದಿಯಂತೆ 78ನೇ ಸ್ವಾತಂತ್ರೊö್ಯÃತ್ಸವ, ಸಸ್ಯ ಸಂತೆ, ಅಶೋಕ ವೀರಸ್ತಂಭದ ಲೋಕಾರ್ಪಣೆ ಕಾರ್ಯಕ್ರಮದ ಬಳಿಕ ಸಚಿವರು ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಪಕ್ಕದಲ್ಲಿ ತೆರೆಯಲಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಚೇರಿಗೆ ಆಗಮಿಸುತ್ತಿದ್ದಂತೆ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ರೆಡ್ಡಿ ಶ್ರೀನಿವಾಸ ಅವರು, ಹೂಗುಚ್ಛ ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಇನ್ನೀತರ ಗಣ್ಯರಿಗೆ ಸ್ವಾಗತ ಕೋರಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ರಿಬ್ಬನ್ ಕತ್ತರಿಸುವ ಮೂಲಕ ನೂತನವಾದ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟಿಸಿದರು. ಕಚೇರಿಯನ್ನು ನೂತನವಾಗಿ ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ಕಚೇರಿಯ ಉದ್ಘಾಟನೆಯ ಬಳಿಕ ಸಚಿವರು, ಸಂಸದರು, ಶಾಸಕರು ಕೆಲ ಹೊತ್ತು ಕಚೇರಿಯಲ್ಲಿ ಕುಳಿತರು. ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ರೆಡ್ಡಿ ಶ್ರೀನಿವಾಸ, ಸದಸ್ಯರಾದ ಜ್ಯೋತಿ ಎಂ.ಗೊAಡಬಾಳ, ಶಾರದಾ ಕಟ್ಟಿಮನಿ, ಶಶಿಕಲಾ ಕಾರಟಗಿ, ಬಾಲಚಂದ್ರನ್, ದೀಪಾ ರಾಠೋಡ, ಎಸ್.ಎ.ಖಾದ್ರಿ ಸೇರಿದಂತೆ ಇನ್ನೀತರರೊಂದಿಗೆ ಸಚಿವರು, ಸಂಸದರು, ಶಾಸಕರು, ಕೊಪ್ಪಳ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮ್ ಎಲ್ ಅರಸಿದ್ದಿ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಇನ್ನೀತರ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

Get real time updates directly on you device, subscribe now.

Comments are closed.

error: Content is protected !!