ರಾಜ್ಯ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ: ಶಿವರಾಜ ತಂಗಡಗಿ

Get real time updates directly on you device, subscribe now.

: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಕಳೆದ 14 ತಿಂಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ ಪಂಚ ಗ್ಯಾರಂಟಿ ಯೋಜನೆಯಡಿ ಸೌಲಭ್ಯಗಳನ್ನು ಒದಗಿಸಿದ್ದು, ಮಹಿಳೆಯರು, ಪಡಿತರ ಚೀಟಿದಾರರು, ಯುವಕರು ಸೇರಿದಂತೆ ರಾಜ್ಯದ ಜನತೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಜಿಲ್ಲಾಡಳಿತದಿಂದ ಆಗಸ್ಟ್ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆಯ ಧ್ವಜಾರೋಹನ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಕಳೆದ ಮೇ-2023ರಲ್ಲಿ ಅಸ್ವಿತ್ವಕ್ಕೆ ಬಂದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಜಾರಿ ಮಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ 2024-25ನೇ ಸಾಲಿನ ಬಜೆಟ್‌ನಲ್ಲಿ 52,000 ಕೋಟಿ ರೂ.ಮೊತ್ತ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಗೃಹಲಕ್ಷಿö್ಮÃ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದ್ದು, ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ 578.08 ಕೋಟಿ ರೂ. ಧನಸಹಾಯ ಪಾವತಿ ಮಾಡಲಾಗಿದೆ. ಜೂನ್ ಮತ್ತು ಜುಲೈ-2024 ಮಾಹೆಗಳ ಧನಸಹಾಯ ಪಾವತಿಯು ಪ್ರಕ್ರಿಯೆ ಹಂತದಲ್ಲಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿಯಲ್ಲಿ ಒಟ್ಟು 2,83,713 ಅರ್ಹ ಗ್ರಾಹಕರಲ್ಲಿ 2,73,175 ಗ್ರಾಹಕರು (ಶೇ.96.29) ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಯೋಜನೆ ಸದುಪಯೋಗ ಪಡೆದುಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯು ಜುಲೈ-2023 ರಿಂದ ಜಾರಿಯಲ್ಲಿದ್ದು ಈವರೆಗೆ ಕೊಪ್ಪಳ ಜಿಲ್ಲೆಯಲ್ಲಿ 209.71 ಕೋಟಿ ರೂ. ಗಳನ್ನು ಈ ಯೋಜನೆಯಲ್ಲಿ ಕಾರ್ಡುದಾರರಿಗೆ ವಿತರಿಸಲಾಗಿದೆ. ಭತ್ತ, ಬಿಳಿಜೋಳ, ಎಣ್ಣೆಕಾಳುಗಳನ್ನು ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಲು ಸರ್ಕಾರವು ಅನುಮೋದನೆ ನೀಡಿದ್ದು, ಅದರಂತೆ ಕೊಪ್ಪಳ ಜಿಲ್ಲೆಯಲ್ಲಿ ಭತ್ತ ಮತ್ತು ಬಿಳಿಜೋಳ ಖರೀದಿ ಕೆಂದ್ರಗಳನ್ನು ತೆರೆದು ಖರೀದಿ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ. 3,970.50 ಕ್ವಿಂಟಲ್ ಜೋಳವನ್ನು ಕೊಪ್ಪಳ ಜಿಲ್ಲೆಯಲ್ಲಿ ಖರೀದಿಸಲಾಗಿದೆ. ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಒಟ್ಟು 4,920 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಇಲ್ಲಿಯವರೆಗೆ 3,819 ಫಲಾನುಭವಿಗಳಿಗೆ ರೂ.1,14,22,500 ನಿರುದ್ಯೋಗ ಭತ್ಯೆಯನ್ನು ಪಾವತಿ ಮಾಡಲಾಗಿದೆ. ಶಕ್ತಿ ಯೋಜನೆಯಡಿ 2023 ರ ಜೂನ್ 11ರಿಂದ ಜುಲೈ 2024ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 442.39 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಈ ವರ್ಷ ಜಿಲ್ಲೆಯಲ್ಲಿ ಶೇ.20ರಷ್ಟು ಅಧಿಕ ಮಳೆ ಆಗಿದೆ. ಮುಂಗಾರು ಹಂಗಾಮಿನಲ್ಲಿ 2.92 ಲಕ್ಷ ಹೆಕ್ಟರ್‌ನಲ್ಲಿ ಬಿತ್ತನೆಯಾಗಿದ್ದು, ಕಾಲುವೆಗೆ ನೀರು ಬಿಡಲಾಗಿದ್ದು ಭತ್ತದ ನಾಟಿಯು ಚುರುಕುಗೊಂಡಿದೆ. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರ ಘೋಷಿಸಿದ ಪ್ರಯುಕ್ತ ಬೆಳೆ ಪರಿಹಾರವಾಗಿ 1,05,024 ಜನ ರೈತರಿಗೆ ರೂ. 109.08 ಕೋಟಿ ರೂ. ಪರಿಹಾರಧನವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.
2023-24ನೇ ಸಾಲಿನಲ್ಲಿ ಒಟ್ಟು ಹಿಂಗಾರು ಮತ್ತು ಮುಂಗಾರು ಹಂಗಾಮಿನಲ್ಲಿ 75,519 ಫಲಾನುಭವಿಗಳಿಗೆ ರೂ. 84.14 ಕೋಟಿ ಬೆಳೆವಿಮೆ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾರ್ಚ-2024ರ ಮಾಹೆಯ ಅಂತ್ಯಕ್ಕೆ 264903 ದಿನಗಳನ್ನು ಸೃಜಿಸಲಾಗಿದೆ. ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ 3673 ಎಕರೆ ಹೆ. ಪ್ರದೇಶ ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ಸರ್ಕಾರದಿಂದ 2020-21ನೇ ಸಾಲಿನ ಬಜೆಟ್ ನಲ್ಲಿ ಅನುಮೋದನೆಗೊಂಡಿರುವ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ 200 ಎಕರೆ ಪ್ರದೇಶದಲ್ಲಿ ಹೊಸದಾಗಿ ಅನುಷ್ಟಾನಗೊಳಿಸಲಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕನ ಪ್ರಸ್ತುತ ವಿಸ್ತçೃತ ಯೋಜನಾ ವರದಿಯನ್ನು ಸಲ್ಲಿಸಲಾಗಿದ್ದು, ಆರ್ಥಿಕ ಬಿಡ್ ಕರೆಯಲಾಗಿದ್ದು, ಮುಂದಿನ ದಿನಗಳಲ್ಲಿ ಕೊಪ್ಪಳ ಸೇರಿದಂತೆ ಕಲ್ಯಾಣ ಕರ್ನಾಟಕದ ರೈತರಿಗೆ ತೋಟಗಾರಿಕೆ ತಂತ್ರಜ್ಞಾನ ಪಾರ್ಕ ಒಂದು ವರದಾನವಾಗಲಿದೆ ಎಂದರು.
2024-25ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಚಿಕ್ಕ ಮ್ಯಾಗೇರಿ, ಬಂಡಿ ಹಾಗೂ ಕುಕನೂರು ತಾಲ್ಲೂಕಿನ ಬಳಗೇರಿ ಗ್ರಾಮಗಳಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರವು ಮಂಜೂರಾತಿ ಆದೇಶವನ್ನು ನೀಡಿರುತ್ತದೆ ಹಾಗೂ ಕನಕಗಿರಿ ತಾಲ್ಲೂಕಿನ ಜೀರಾಳ ಮತ್ತು ಗೌರೀಪುರದಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವ ಸಂಬAಧ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿರುತ್ತದೆ. 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ರೂ.53 ಲಕ್ಷ ವೆಚ್ಚದಲ್ಲಿ ಜಿಲ್ಲಾ ಆಯುಷ್ ಕಚೇರಿ ಕಟ್ಟಡ ನಿರ್ಮಾಣ ಹಾಗೂ ಗಂಗಾವತಿ ತಾಲ್ಲೂಕಿನ ಆಗೋಲಿಯಲ್ಲಿ ರೂ.50 ಲಕ್ಷ ವೆಚ್ಚದಲ್ಲಿ ಸರ್ಕಾರಿ ಆಯುರ್ವೇದಿಕ್ ಡಿಸ್ಪೆನ್ಸರಿ ಕಟ್ಟಡ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದೆ.
2023-24 ನೇ ಸಾಲಿನಲ್ಲಿ ಒಟ್ಟು ರೂ.26 ಲಕ್ಷಗಳ ಆಯುರ್ವೇದ ಮತ್ತು ಹೋಮಿಯೋಪತಿ ಔಷಧಗಳನ್ನು ಜಿಲ್ಲೆಯ 04 ಆಯುರ್ವೇದ ಆಸ್ಪತ್ರೆಗಳು ಹಾಗೂ 15 ಡಿಸ್ಪೆನ್ಸರಿಗಳ ಮೂಲಕ ರೋಗಿಗಳಿಗೆ ಉಚಿತವಾಗಿ ವಿತರಿಸಲಾಗಿದೆ. ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳವೆಂದು ಪ್ರಸಿದ್ಧವಾದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕಾಮಗಾರಿಯನ್ನು ಪ್ರಾರಂಭಿಸಲು ಸರ್ಕಾರದ ಆದೇಶದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮ (ಕೆ.ಟಿ.ಐ.ಎಲ್) ಬೆಂಗಳೂರು ಅವರಿಂದ ಈಗಾಗಲೇ 21 ಕೋಟಿ ಕಾಮಗಾರಿಗಳ ಕೆಲಸ ಆರಂಭವಾಗಿದೆ. ಜಿಲ್ಲೆಯಲ್ಲಿನ ಐತಿಹಾಸಿಕ ಕ್ಷೇತ್ರಗಳಾದ ಕನಕಗಿರಿ ಮತ್ತು ಆನೆಗೊಂದಿ ಪ್ರದೇಶಗಳಲ್ಲಿ ಘತ ವೈಭವವನ್ನು ಮರುಕಳಿಸುವಂತೆ ವಿಜೃಂಭಣೆಯಿAದ ಉತ್ಸವಗಳನ್ನು ಆಚರಣೆ ಮಾಡಲಾಗಿರುತ್ತದೆ. ಮುಖ್ಯಮಂತ್ರಿಗಳು ಕನಕಗಿರಿ ಉತ್ಸವ-2024ರ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬ್ರಾö್ಯಂಡ್ ಕೊಪ್ಪಳ ಲೋಗೊ ಅನಾವರಣಗೊಳಿಸಿ ಸ್ಫೂರ್ತಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ.02 ಕೋಟಿಗಳ ಅನುದಾನದಲ್ಲಿ ಜಿಲ್ಲೆಯ ಸಂಪೂರ್ಣ ಪ್ರವಾಸೋದ್ಯಮದ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 2024-25 ನೇ ಸಾಲಿಗೆ 82 ಲಕ್ಷ ಮಾನವ ದಿನಗಳ ಸೃಜನೆಯ ಗುರಿಯಿದ್ದು, ಆಗಸ್ಟ್ 06 ರಂತೆ 54.99 ಲಕ್ಷ ಮಾನವ ದಿನಗಳನ್ನು ಸೃಜಿಸಿ ಶೇ.67 ರಷ್ಟು ಪ್ರಗತಿ ಸಾಧಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 16 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳ ಪೈಕಿ 13 ಕಾಮಗಾರಿಗಳು ಪೂರ್ಣಗೊಂಡಿರುತ್ತವೆ. ಇನ್ನುಳಿದಂತೆ 403 ಕೋಟಿ ಅಂದಾಜು ಮೊತ್ತದ 03 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಾದ ಕೆರೆಹಳ್ಳಿ ಮತ್ತು ಇತರೆ 103 ಡಿ.ಬಿ.ಓ.ಟಿ ಆಧಾರಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಚಿಕ್ಕ ಬೆಣಕಲ್ ಮತ್ತು ಇತರೆ 61 ಗ್ರಾಮಗಳ ಡಿ.ಬಿ.ಓ.ಟಿ ಆಧಾರಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿರುತ್ತವೆ. ಮುಂದುವರೆದು ಜೀರಾಳ ಮತ್ತು ಇತರೆ 17 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ, ಸರ್ವೆ ಕಾರ್ಯ ಪೂರ್ಣಗೊಂಡಿರುವುದರಿAದ ಸದರಿ ಯೋಜನೆಯ ವಿನ್ಯಾಸವನ್ನು ಎಸ್.ಟಿ.ಎ ಸಮಿತಿಯ ಅನುಮೋದನೆಗಾಗಿ ಸಲ್ಲಿಸಲಾಗಿದೆ.
ಕೊಪ್ಪಳ ನಗರದ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಅಂದಾಜು ಮೊತ್ತ 30 ಕೋಟಿ ರೂ.ಗಳಿಗೆ ಗಂಗಾವತಿ ನಗರದ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 77.48 ಕೋಟಿ ರೂ.ಗಳಿಗೆ ಯೋಜನೆ ರೂಪಿಸಲಾಗಿದೆ. ಈ ಸಂಬAಧ ಸರ್ವೇ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಇನ್ನುಳಿದ 7-ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಸಹ ಯೋಜನೆ ರೂಪಿಸಲು ಡಿಪಿಆರ್ ತಯಾರಿಸುವ ಹಂತದಲ್ಲಿರುತ್ತದೆ. ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ (ಹಂತ-4) ರಡಿ ಜಿಲ್ಲೆಯಾದ್ಯಂತ ವೈಯಕ್ತಿಕ ಮತ್ತು ಸಮುದಾಯ ಕಾರ್ಯಕ್ರಮ ಆಧಾರಿತ ಮೊತ್ತ 105.00 ಕೋಟಿ ರೂ.ಗಳ 113-ಕಾಮಗಾರಿಗಳು ಪ್ರಗತಿ ಹಂತದಲ್ಲಿರುತ್ತವೆ.
ಕೊಪ್ಪಳ ಜಿಲ್ಲೆಯಲ್ಲಿ 2023-24ರಲ್ಲಿ 2,294 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿಯಿದ್ದವು. ಈ ಹುದ್ದೆಗಳಲ್ಲಿ 557 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಗಜೆಟ್ ನೊಟಿಫಿಕೇಷನ್ ಹೊರಡಿಸಲಾಗಿತ್ತು. ಅಂತಿಮವಾಗಿ 455 ಶಿಕ್ಷಕರು ನೇಮಕವಾಗಿ ಸೇವೆಗೆ ಹಾಜರಾಗಿರುತ್ತಾರೆ. ಈ ಶಿಕ್ಷಕರಿಗೆ ಎನ್.ಜಿ.ಓ. ರವರ ಮೂಲಕ 05 ದಿನದ ತರಬೇತಿ ನೀಡಲಾಗಿದೆ. ಈ 445 ಶಿಕ್ಷಕರನ್ನು ಶಿಕ್ಷಕರ ಬೇಡಿಕೆಯಿದ್ದ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗಿದೆ.
2024-25ನೇ ಸಾಲಿಗೆ ಜಿಲ್ಲೆಯ ರಾಜೂರ-ಆಡೂರ ಹಾಗೂ ಮುಧೋಳ-ಕರ್ಮುಡಿ ಗ್ರಾಮಗಳಿಗೆ 02 ಸರ್ಕಾರಿ ಪದವಿ ಪೂರ್ವ ಕಾಲೇಜ್ ಗಳನ್ನು ಕೆಕೆಆರ್‌ಡಿಬಿ ಅನುದಾನದಲ್ಲಿ ಮಂಜೂರು ಮಾಡಲಾಗಿದೆ.2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ 208.14 ಕೋಟಿ ರೂ. ಹಾಗೂ ಮ್ಯಾಕ್ರೋ ವಲಯದಲ್ಲಿ 89.20 ಕೋಟಿ ರೂ. ಹೀಗೆ ಒಟ್ಟು 297.34 ಕ್ಕೆ ಕ್ರಿಯಾ ಯೋಜನೆ ಅನುಮೋದಿಸಲಾಗಿದ್ದು, ವಿವಿಧ ಕಾಮಗಾರಿಗಳು ಪ್ರಗತಿ ಹಂತದಲ್ಲಿರುತ್ತವೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಿಂದ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗಿದೆ. 2024-25ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ 238.81 ಕೋಟಿ ರೂ. ಹಾಗೂ ಮ್ಯಾಕ್ರೋ ವಲಯದಲ್ಲಿ 128.59 ಕೋಟಿ ರೂ. ಹೀಗೆ ಒಟ್ಟು 367.40 ಕೋಟಿ ಅನುದಾನವನ್ನು ನಿಗದಿಪಡಿಸಲಾಗಿರುತ್ತದೆ. ಕ್ರಿಯಾಯೋಜನೆ ಅನುಮೋದನೆ ಪಕ್ರಿಯೆ ಹಂತದಲ್ಲಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಹಾಗೂ ಕುಕನೂರ ತಾಲೂಕಿನ 38 ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ಅಂತರ್ಜಲ ಅಭಿವೃದ್ಧಿಗಾಗಿ ಹೊಸ ಕೆರೆ ನಿರ್ಮಾಣ ಮತ್ತು ನೀರು ತುಂಬಿಸುವ ಯೋಜನೆಗೆ ಘನ ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ರೂ 970.00 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಘೋಷಿಸಿದ್ದು, ಯೋಜನೆಯ ಅನುಷ್ಠಾನ ಪ್ರಕ್ರಿಯೆಯು ಪ್ರಗತಿಯಲ್ಲಿರುತ್ತದೆ. ಹೀಗೆ ಸರ್ಕಾರ ಮತ್ತು ಸ್ಥಳೀಯ ಮೂಲಗಳಿಂದ ದೊರಕಿರುವ ಸಾವಿರಾರು ಕೋಟಿ ಅನುದಾನದಿಂದ ಜಿಲ್ಲೆಯ ಸಮಗ್ರ ಬೆಳವಣಿಗೆಗೆ ಎಲ್ಲಾ ಆಯಾಮಗಳಿಂದ ಕ್ರಿಯಾ ಯೋಜನೆ ರೂಪಿಸಿ, ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುತ್ತಿದೆ ಎಂದು ತಿಳಿಸಿದರು.
ಹೋರಾಟಗಾಥೆ ಸ್ಮರಣೀಯ: ನಮ್ಮ ದೇಶದ ಸ್ವಾತಂತ್ರö್ಯದ ಹೋರಾಟಗಾಥೆಯು ಸ್ಮರಣೀಯವಾಗಿದೆ. ಜವಾಹರಲಾಲ್ ನೆಹರು ಅವರು 1947 ಆಗಸ್ಟ್ 14ರ ಮಧ್ಯರಾತ್ರಿ ಭಾರತೀಯ ರಾಜ್ಯಾಂಗದ ಕುರಿತು ಮಾಡಿದ ಭಾಷಣವನ್ನು ನಾವು ಮತ್ತೆ ಮತ್ತೆ ಸ್ಮರಿಸಬೇಕಿದೆ. ಸ್ವಾತಂತ್ರö್ಯವು ‘ಭವಿಷ್ಯದೊಂದಿಗೆ ಅನುಸಂಧಾನ.. ನಾವು ಹೊಸ ಹಾದಿ ತುಳಿಯುತ್ತಿದ್ದೇವೆ.’ ಎಂದು ಆ ವೇಳೆ ನೆಹರೂ ಅವರು ಹೇಳಿದರು. ಆ ಘಳಿಗೆಯಿಂದ ಭಾರತಿಯರಲ್ಲಿ ಹೊಸ ಕನಸು ಹೊಸ ಭರವಸೆ ಚಿಗುರಿತು. ಭಾರತದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಮಹನಿಯರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ. ನಾವೆಲ್ಲರೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ. ಜಾತಿ, ಧರ್ಮ, ಭೇದ-ಭಾವ ಹೊಂದದೆ ಎಲ್ಲರೂ ಸಮಾನರಾಗಿ ಶಾಂತಿಯಿAದ ಬಾಳೋಣ. ದೇಶಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾದ ಈ ದಿನದಂದು ಸಮತಾ ಸಮಾಜ ಕಟ್ಟಲು ಸಂಕಲ್ಪ ಮಾಡೋಣ ಎಂದರು.
ಸಕಲ ಜಾತಿ, ಧರ್ಮ, ಭಾಷೆ, ಪ್ರದೇಶಗಳ ಜನರೆಲ್ಲಾ ಒಗ್ಗಟ್ಟಾಗಿ ಬೃಹತ್ ಪ್ರಜಾಪ್ರಭುತ್ವದ ಯಶಸ್ಸಿಗಾಗಿ ನಾವೆಲ್ಲರೂ ಸಾಮರಸ್ಯದಿಂದ ಬಾಳುತ್ತಿದ್ದೇವೆ. ಬಹುಜನರ ಒಳಿತಿಗಾಗಿ ಬಹುಜನರ ಕಲ್ಯಾಣಕ್ಕಾಗಿ ಎಂಬ ಮಂತ್ರವನ್ನು ಸಾರುತ್ತಾ ಭವ್ಯಭಾರತ ಕಟ್ಟುವ ಸಂಕಲ್ಪ ಮಾಡೋಣ, ಭಾರತಕ್ಕೊಂದು ಹೊಸ ಭಾಷ್ಯ ಬರೆಯೋಣ ಎಂದು ಸಚಿವರು ತಿಳಿಸಿದರು.
ಸಮಾರಂಭದಲ್ಲಿ ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರರಾದ ವಿಠ್ಠಲ್ ಚೌಗಲಾ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ಧರು.

Get real time updates directly on you device, subscribe now.

Comments are closed.

error: Content is protected !!