ಸಂವಿಧಾನದಲ್ಲಿ ಘೋಷಿಸಿದ ಸಾಮಾಜಿಕ ನ್ಯಾಯ ಸಾಕರಗೊಳಿಸುವ ಕಾರ್ಯಕ್ಷಮತೆಯ ಸಂಕಲ್ಪ ಮಾಡೋಣ: ನಲಿನ್ ಅತುಲ್

Get real time updates directly on you device, subscribe now.

ಭಾರತದ ಸಂವಿಧಾನದಲ್ಲಿ ಪ್ರತಿಜ್ಞೆ ಮಾಡಿರುವ ಸಾಮಾಜಿಕ ಆರ್ಥಿಕ ನ್ಯಾಯವು ಕೊಪ್ಪಳ ಜಿಲ್ಲೆಯ ಪ್ರತಿಯೊಬ್ಬ ನಾಗರಿಕನಿಗೆ ತಲುಪುವ ಹಾಗೆ ಕಾರ್ಯಪ್ರವೃತ್ತರಾಗಲು ಎಲ್ಲರೂ ಸೇರಿ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಆಗಸ್ಟ್ 15ರಂದು ನಡೆದ 78ನೇ ಸ್ವಾತಂತ್ರ‍್ಯೊತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತದ ಸಂವಿಧಾನದ ಪ್ರಸ್ತಾವಣೆಯಲ್ಲಿ ಪ್ರತಿಯೊಬ್ಬರಿಗು ಸಾಮಾಜಿಕ ನ್ಯಾಯ ದೊರೆಯಬೇಕು ಎಂಬುದಾಗಿ ಘೋಷಣೆ ಮಾಡಿದ್ದೇವೆ. ರಾಜಕೀಯ ಸ್ವಾತಂತ್ಯ ದೊರೆತಂತೆ ಜನತೆಗೆ ಸಾಮಾಜಿಕ, ಆರ್ಥಿಕ ನ್ಯಾಯವು ಸಹ ಸಿಗಬೇಕಿದೆ ಎಂದರು.
ಯಾದಗಿರಿ ಜಿಲ್ಲೆಗೆ ಹೋಲಿಸಿದರೆ ಕೊಪ್ಪಳ ಜಿಲ್ಲೆಯ ತಲಾ ಆದಾಯ ಕಡಿಮೆ ಇದೆ. ರಾಜ್ಯದಲ್ಲಿ ಕೆಳಗಿನಿಂದ 5ನೇ ಸ್ಥಾನದಲ್ಲಿದೆ. ಇದು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ವಿಷಯವಾಗಿದೆ. ಈ ದಿಶೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸಹ ಹೊಣೆಗಾರಿಕೆಯಿಂದ ಕಾರ್ಯನಿರ್ವಹಣೆ ಮಾಡಿ ಕೊಪ್ಪಳ ಜಿಲ್ಲೆಯ ಜನರ ಜೀವನ ಮಟ್ಟದಲ್ಲಿ ಗಣನೀಯ ಸುಧಾರಣೆ ತರಬೇಕಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳು ಜಾರಿಯಾದ ನಂತರ ಜಿಲ್ಲೆಯ ಸಾರ್ವಜನಿಕರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿದೆ ಎಂದು ತಿಳಿಸಿದರು.
ಸಂವಿಧಾನದಲ್ಲಿ ಹೇಳಿದ ಸಾಮಾಜಿಕ ನ್ಯಾಯಾದ ಸಾಕಾರಕ್ಕೆ ನಾವೆಲ್ಲರು ಹಗಲಿರುಳು ಶ್ರಮಿಸಬೇಕು. ಸರಕಾರಿ ಕಚೇರಿಗಳಿಗೆ ಯಾವುದೇ ಸಹಾಯ ಸಹಕಾರ ಕೇಳಿ ಬರುವ ಜನತೆಗೆ ನಾವು ಪ್ರಾಮಾಣಿಕವಾಗಿ ಸ್ಪಂದನೆ ನೀಡುತ್ತೇವೆ ಎನ್ನುವ ಸಂಕಲ್ಪ ಮಾಡಿ ಮುನ್ನುಗ್ಗೋಣ ಎಂದು ತಿಳಿಸಿದರು.
ಜಿಲ್ಲಾಡಳಿತ ಭವನಕ್ಕೆ ನವೀಕರಣ: ಕೊಪ್ಪಳದಲ್ಲಿ ಜಿಲ್ಲಾಡಳಿತ ಭವನ ಸ್ಥಾಪನೆಯಾಗಿ ಈಗಾಗಲೇ 25 ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ರಜತ ಮಹೋತ್ಸವವು ಕಳೆದ ವರ್ಷ ನಡೆದಿದೆ. ಇದೀಗ ವಿಶೇಷ ಅನುದಾನದಿಂದ ಜಿಲ್ಲಾಡಳಿತ ಭವನವನ್ನು ನವೀಕರಣಗೊಳಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ನಿರ್ದೇಶನರಾದ ರುದ್ರೇಶಪ್ಪ ಟಿ.ಎಸ್. ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: