ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸಾಧನೆಗೆ ಪುರಸ್ಕಾರ
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಇದೇ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ‘ಮೌಲಾನಾ ಅಬುಲ್ ಕಲಾಂ ಆಜಾದ್ ಪ್ರತಿಭಾ ಪುರಸ್ಕಾರ’ ನೀಡುತ್ತಿದೆ.
ಹಿರೇಮನ್ನಾಪುರದ ಕಾಸಿಂ ಸಾಬ್ ಇಮಾಮ್ ಸಾಬ್ ಗರಡಿಮನಿ ಸೇರಿದಂತೆ ಇತರರನ್ನು ಜಿಲ್ಲಾ ಕ್ರೀಡಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಅಲ್ಪಸಂಖ್ಯಾತ ಸಮುದಾಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ಹೆಚ್ಚಿನ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಸೇರುವುದಿಲ್ಲ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಉತ್ತೇಜಿಸಲು ಮತ್ತು ಡ್ರಾಪ್‌ಔಟ್ ಕಡಿಮೆ ಮಾಡುವುದಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಉತ್ತೇಜಿಸಿದರೆ ಒಂದಷ್ಟು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಆಲೋಚಿಸುತ್ತಾರೆ ಎಂಬ ಉದ್ದೇಶ ಹೊಂದಲಾಗಿದೆ.
Comments are closed.