ತುಂಗಭದ್ರಾ ಜಲಾಶಯ 5 ತಡೆ ಗೇಟುಗಳ ಅಳವಡಿಕೆ ಸರ್ವರಿಗೂ ಧನ್ಯವಾದ ಸಲ್ಲಿಸಿದ ಸಿಎಂ

Get real time updates directly on you device, subscribe now.

ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19 ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು, ಈ ಸವಾಲಿನ ಕಾರ್ಯಕ್ಕೆ ಸ್ಥಳದಲ್ಲೇ ಮೊಕ್ಕಾಂಹೂಡಿ ಸೂಕ್ತ ಮಾರ್ಗದರ್ಶನ ನೀಡಿದ ಡ್ಯಾಂ ಗೇಟ್ ನಿರ್ಮಾಣ ಹಾಗೂ ಸುರಕ್ಷತೆ ತಜ್ಞ ನಿವೃತ್ತ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರಿಗೆ ಹಾಗೂ ಈ ಕಾರ್ಯದಲ್ಲಿ‌ ಅವಿರತ ಶ್ರಮಿಸಿದ ಎಲ್ಲಾ ಇಂಜಿನಿಯರರಿಗೆ, ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ, ಕಾರ್ಮಿಕರಿಗೆ ನಾಡಿನ ರೈತರ ಪರವಾಗಿ ಮತ್ತು ವೈಯಕ್ತಿಕವಾಗಿ  ಸರ್ವರಿಗೂ  ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ

ಭಾರೀ ಪ್ರಮಾಣದ ನೀರಿನ ಹೊರಹರಿವಿದ್ದರೂ ಗೇಟ್ ಅಳವಡಿಕೆಯಂತಹ ಕಷ್ಟಸಾಧ್ಯವಾದ ಕಾರ್ಯವನ್ನು ಸಾಧ್ಯವಾಗಿಸಿ, ನಾಡಿನ ರೈತರನ್ನು ಆತಂಕದಿಂದ ಮುಕ್ತಗೊಳಿಸಿದ್ದೇವೆ. ತುಂಗಭದ್ರಾ ಜಲಾಶಯದ ನೀರನ್ನು ಆಧರಿಸಿ ಎರಡು ಬೆಳೆ ಬೆಳೆಯುವ ರೈತರು ಇನ್ನು ನಿಶ್ಚಿಂತರಾಗಿ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಬಹುದು.

ನಾಡಿನ ಅನ್ನದಾತರು ಬಹುದೊಡ್ಡ ಸಂಕಷ್ಟದಿಂದ ಪಾರಾದದ್ದು ನನಗೆ ಖುಷಿ ನೀಡಿದೆ  ಎಂದು ಹೇಳಿದ್ದಾರೆ

 

https://x.com/CMofKarnataka/status/1824827031974015329?t=_DurOU2NRCd66uPhEObhCA&s=19

Get real time updates directly on you device, subscribe now.

Comments are closed.

error: Content is protected !!