ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳ ಪ್ರತಿಭಟನೆ
ಕೊಪ್ಪಳ: ತಾಲೂಕಿನ ಬೂದುಗುಂಪಾ ಕ್ರಾಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಕೆಲ ಕಾಲ ಕೊಪ್ಪಳ – ಗಂಗಾವತಿ ರಸ್ತೆ ತಡೆ ನಡೆಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಕೀರಪ್ಪ ಎಮ್ಮಿ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ಹಣತೆಯಂತೆ ವರ್ತಿಸುತ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ಸಂವಿಧಾನ ಬಾಹಿರ ನಿರ್ಣಯ ಕೈಗೊಂಡಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನೀಯ. ಕೇಂದ್ರದ ಮೋದಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ ಭವನವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ವಿಪರ್ಯಾಸ. ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ಅನುಮತಿಯನ್ನು ವಾಪಸ್ ಪಡೆಯಬೇಕು. ಇಲ್ಲವಾದರೆ ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಮುಖಂಡರಾದ ಎ.ವಿ ಗುರುರಾಜ್, ನಜೀರಸಾಬ ಅರಗಂಜಿ, ಗಿರೀಶ್ ಹಿರೇಮಠ, ಬಸವರಾಜ ಪೆದ್ಲ, ಸೀಮಣ್ಣ ಗಬ್ಬೂರ, ಕುಬೇರ ಮಜ್ಜಿಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರಿಯಪ್ಪ ಸಂಗಟಿ, ದಾಸಪ್ಪ ಕುದರಿಮೋತಿ, ರವಿ ಪೆದ್ಲ, ವೀರೇಶ ಬಡಗಿ, ಮಂಜುನಾಥ ಜೀನಿನ,ಅಮಾಜಪ್ಪ ತುರವಿಹಾಳ, ನಿಂಗಜ್ಜ ಅಡಿಗಿ, ಮಂಜುನಾಥ ಕಾಟ್ರಳ್ಳಿ, ಫಕೀರಪ್ಪ ದೊಡ್ಡಮನಿ, ನಾಗರಾಜ ಕಂಬಳಿ, ಆದೆಪ್ಪ ಇಂದರಗಿ, ಗೋಪಾಲ್ ಕೂಕನಪಳ್ಳಿ, ಸುರೇಶ್ ದನಕನದೊಡ್ಡಿ, ಪರಶುರಾಮ ಕೆರೆಹಳ್ಳಿ, ರಮೇಶ್ ಅಂಜನಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು.
Comments are closed.