ಮಿಷನ್ ಶಕ್ತಿ ಯೋಜನೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ “ಮಿಷನ್ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಹೊಸದಾಗಿ ಸೃಜಿಸಲಾದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಾಪಿಸಲಾದ ಉಪ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಕಾರ್ಯನಿರ್ವಹಿಸಲು ಜಿಲ್ಲಾ ಮಷಿನ್ ಸಂಯೋಜಕರು, ಪಿ.ಎಮ್.ಎಮ್.ವಿ.ವೈ ಜಿಲ್ಲಾ ಸಂಯೋಜಕರು ಹಾಗೂ ಸ್ಪೇಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟ್ರಸಿ ಮತ್ತು ಅಕೌಂಟೆಂಟ್, ಈ ಮೂರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲಾಗುತ್ತಿದೆ.
ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಶಾಸ್ತ್ರ ಮತ್ತು ಅರ್ಥಶಾಸ್ತ್ರದಲ್ಲಿ ಪದವಿ ಹೊಂದಿರಬೇಕು. ಇದರೊಂದಿಗೆ ಸರ್ಕಾರಿ ಅಥವಾ ಅರೆಸರ್ಕಾರಿ ಸಂಸ್ಥೆಗಳಲ್ಲಿ 03 ವರ್ಷ ಅನುಭವ ಹೊಂದಿರಬೇಕು. 18 ರಿಂದ 45 ವಯಸ್ಸಿನವರು ಆಗಿರಬೇಕು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಹಿಂದೆ ಉತ್ತಮ ಕಾರ್ಯ ನಿರ್ವಹಿಸಿರುವ ಬಗ್ಗೆ ದಾಖಲೆ ಹೊಂದಿರುವ ಹಾಗೂ ಕನಿಷ್ಠ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ, ತರಬೇತಿಗಳನ್ನು ಹಮ್ಮಿಕೊಳ್ಳಲು ಸಾಮರ್ಥ್ಯ/ಕೌಶಲ್ಯ ಹೊಂದಿರುವ, ಗಣಕಯಂತ್ರ ನಿರ್ವಹಣೆಯಲ್ಲಿ ಪರಿಣಿತಿ, ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪರಿಪೂರ್ಣ ಹಿಡಿತವುಳ್ಳ ಅಭ್ಯರ್ಥಿಗಳು ನಿಗದಿ ಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು, ಅನುಭವ, ಕಂಪ್ಯೂಟರ್ ತರಬೇತಿ ಪಡೆದ ಪ್ರಮಾಣ ಪತ್ರಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಸಂಬಂಧಿಸಿದ ಷರತ್ತುಗಳು, ಅರ್ಹತೆ ಹಾಗೂ ಅಗತ್ಯ ದಾಖಲೆಗಳ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೂಚನಾ ಫಲಕ ವೀಕ್ಷಿಸಬಹುದು. ಈ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆದು ಸೆಪ್ಟೆಂಬರ್ 06 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿ ಸಮಯದಲ್ಲಿ ಸಂಜೆ 05.30ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಕಛೇರಿಗೆ ಮೊ.ಸಂ: 9110481302 & 9945554128 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿದೇರ್ಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.