ಸದ್ಭಾವನಾ ದಿನ: ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Get real time updates directly on you device, subscribe now.

: ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ನಡೆಯಿತು.
 ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿಯವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ, ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಸಹ ಪ್ರತಿಜ್ಞೆ ಮಾಡುತ್ತೇನೆ ಎಂದು ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರತಿಜ್ಞೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!