ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ ಜೈಲು ಶಿಕ್ಷೆ
Kannadanet NEWS
ಕೊಪ್ಪಳ ಜೂನ್ 02 : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ದೇವೇಂದ್ರ ಕುಕನೂರ ಸಾ:ಹಳೆಕನಕಾಪುರ ಈತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಗೌರವಾನ್ವಿತ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ಇವರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.
*ಪ್ರಕರಣ ಏನು:?* ಆರೋಪಿ ದೇವೆಂದ್ರ ಕುಕನೂರು ಈತನು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸುಮಾರು 4 ವರ್ಷಗಳಿಂದ ಪ್ರೀತಿಸುತ್ತ ಬಂದು ಪ್ರೀತಿಸುವ ವಿಷಯ ಮನೆಯಲ್ಲಿ ಗೊತ್ತಾದರೆ ಒಪ್ಪಿಕೊಳ್ಳುವುದಿಲ್ಲ ಕಾರಣ ಊರು ಬಿಟ್ಟು ಹೋಗಿ ಮದುವೆ ಮಾಡಿಕೊಳ್ಳೋಣ ಎಂದು ಬಾಲಕಿಗೆ ಪುಸಲಾಯಿಸಿ, 2017ರ ಜೂನ್ 30ರಂದು ಬಾಲಕಿಯು ಪರೀಕ್ಷೆ ಬರೆಯಲು ಕೊಪ್ಪಳಕ್ಕೆ ಹೋದಾಗ ಆರೋಪಿತನು ಬಾಲಕಿಗೆ ಪೋನ್ ಮಾಡಿ ಗಿಣಿಗೇರಾಕ್ಕೆ ಕರೆಯಿಸಿಕೊಂಡು ಅಲ್ಲಿಂದ ದಾವಣಗೇರಿಗೆ ಹೋಗಿ, ಅಲ್ಲಿನ ಒಂದು ಗುಡಿಯಲ್ಲಿ ಮದುವೆಯಾಗಿ ಇತರ ದೇವಸ್ಥಾನಗಳಿಗೆ ಸುತ್ತಾಡಿ, ಹಿಟ್ನಾಳ ಗ್ರಾಮಕ್ಕೆ ಬಂದು ಅಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿ ಬಾಲಕಿಯೊಂದಿಗೆ ಪ್ರತಿದಿನ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದೂರು ಸ್ವೀಕರಿಸಿದ ಮುನಿರಾಬಾದ್ ಪೊಲೀಸರು ಪ್ರಕರಣದ ತನಿಖೆಯನ್ನು ಕೊಪ್ಪಳ ಗ್ರಾಮೀಣ ವೃತ್ತದ ಸಿಪಿಐ ಅವರು ನಿರ್ವಹಿಸಿದ್ದು, ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಭಿತಾಗಿದ್ದರಿಂದ ಆರೋಪಿತನ ವಿರುದ್ದ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದಲ್ಲಿ ಆರೋಪಿ ಹಳೆಕನಕಾಪುರದ ದೇವೆಂದ್ರ ಕುಕನೂರು ಈತನ ಮೇಲಿರುವ ಆರೋಪಗಳು ಸಾಭೀತಾಗಿವೆ ಎಂದು 10 ವರ್ಷಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ.ಗಳ ದಂಡ ಭರಿಸುವಂತೆ ಆದೇಶಿಸಿ
ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಧೀಶರು ಕೊಪ್ಪಳ ಇವರು ತೀರ್ಪು ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು ಎಂದು ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿ, ಹೆಚ್ವುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ತ್ಚರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯ ಕೊಪ್ಪಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.