ಕಳ್ಳ ಸಾಗಾಣಿಕೆ & ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳ ಯೋಜನೆ: ಜಾಗೃತಿ ಕಾರ್ಯಕ್ರಮ

Get real time updates directly on you device, subscribe now.

: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಜಿಲ್ಲಾ ಪೋಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಬುಧವಾರದಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಪ್ಪಳದಲ್ಲಿ ರಾಷ್ಟಿçÃಯ ಕಾನೂನು ಪ್ರಾಧಿಕಾರದಿಂದ ಅನುಷ್ಠಾನದಲ್ಲಿರುವ ಕಳ್ಳ ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಳಿಪಶುಗಳ ಯೋಜನೆ-2015ರ ಕುರಿತು ಜಾಗೃತಿ ಕಾರ್ಯಕ್ರಮ ನೆಡೆಯಿತು.
 ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರಗದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ದೇಶದಲ್ಲಿ ಸ್ವತಂತ್ರö್ಯ ಸಿಕ್ಕು 78ವರ್ಷಗಳಾದರೂ ಸಹ ಹೆಣ್ಣುಮಕ್ಕಳಿಗೆ ಯಾವುದೇ ರೀತಿ ರಕ್ಷಣೆ ಇಲ್ಲ. ದಿನನಿತ್ಯ ನಾವು ಸುದ್ದಿ ಮಾಧ್ಯಮದಲ್ಲಿ ನೋಡುತ್ತಿರುವ ಹಾಗೇ ದಿನದಿಂದ ದಿನಕ್ಕೆ ಅತ್ಯಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಹಾಗೂ ಮಕ್ಕಳ ಕಳ್ಳ ಸಾಗಾಣಿಕೆಯೂ ಹೆಚ್ಚುತ್ತಿವೆ, ಆದ್ದರಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಮಕ್ಕಳು ಮತ್ತು ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು. ಜಿಲ್ಲಾ ವಕೀಲರ ಸಂಘAದ ಅಧ್ಯಕ್ಷರಾದ ಎ.ವಿ. ಕಣವಿ ಅವರು ಮಾತನಾಡಿ ಮಹಿಳೆಯರಿಗೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು. ಬಡತನ ಸ್ಥಿತಿಯಲ್ಲಿರುವ ಕುಟುಂಬಗಳನ್ನು ದುಡ್ಡಿನ ಆಶೆ ತೋರಿಸಿ ಮಕ್ಕಳನ್ನು ಸಾಗಾಣಿಕೆ ಮಾಡುತ್ತಾರೆ ಇದಕ್ಕಾಗಿ ಎಲ್ಲಾರೂ ತಮ್ಮ ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ(ಪ್ರ) ಗಂಗಪ್ಪ ಅವರು ಮಾತನಾಡಿ, ಭಾರತದಲ್ಲಿ ಮಹಿಳೆಯರಿಗೆ ಅತಿ ಹೆಚ್ಚು ಕಾನೂನುಗಳಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಶರಣಬಸವ ಸಜ್ಜನ್, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಶಿವಾನಂದ, ಕೊಪ್ಪಳ ಉಪ ವಿಭಾಗದ ಪೋಲೀಸ್ ಉಪಾಧೀಕ್ಷಕರಾದ ಮುತ್ತಣ್ಣ ಸರವಗೋಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಹಾಂತಸ್ವಾಮಿ ಪೂಜಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ, ವಕೀಲರಾದ ಹನುಮಂತ ರಾವ್ ಕೆ ಲ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!