ಬಾಲಕಾರ್ಮಿಕ-ಕಿಶೋರ ಕಾರ್ಮಿಕ ಕಾಯ್ದೆ ಅಡಿ ಕುಷ್ಟಗಿ, ಯಲಬುರ್ಗಾದಲ್ಲಿ ವಿಶೇಷ ದಾಳಿ: ತಪಾಸಣೆ

Get real time updates directly on you device, subscribe now.

 : ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ  ಮತ್ತು  ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ “ಸ್ವಾತಂತ್ರ್ಯ ದಿನಾಚರಣೆ 2024ರ” ಅಂಗವಾಗಿ  PAN- INDIA Rescue & Rehabilitation Campaign of Child and Adolescent Labour ರಕ್ಷಣಾ ಅಭಿಯಾನ ಕಾರ್ಯಾಚರಣೆ, ವಿಶೇಷ ದಾಳಿ, ತಪಾಸಣೆ ಮತ್ತು ತಾಲ್ಲೂಕ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳಲ್ಲಿ ನಡೆಯಿತು.
ಕುಷ್ಟಗಿ ತಾಲ್ಲೂಕ ಟಾಸ್ಕ್ ಫೋರ್ಸ್ ಸಮಿತಿ ಸಭೆ: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ  ಕುಷ್ಟಗಿಯ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಇತ್ತೀಚೆಗೆ ತಾಲ್ಲೂಕ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಜರುಗಿತು.
ಯಲಬುರ್ಗಾ ತಾಲ್ಲೂಕ ಟಾಸ್ಕ್ ಫೋರ್ಸ್ ಸಮಿತಿ ಸಭೆ: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ  ಯಲಬುರ್ಗಾ ಉಪ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಜರುಗಿತು.
ವಿಶೇಷ ದಾಳಿ, ತಪಾಸಣೆ: ಸಭೆಯ ಬಳಿಕ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ದಾಳಿ, ತಪಾಸಣೆ ಕಾರ್ಯವು  ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಯಿತು. ಈ ತಪಾಸಣೆ ಕಾರ್ಯದಲ್ಲಿ   ತಹಶೀಲ್ದಾರರು, ಉಪ ತಹಶೀಲ್ದಾರರು, ಬಾಲಕಾರ್ಮಿಕ ಯೋಜನಾ ನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನೆ ಕೊಪ್ಪಳ, ಕುಷ್ಟಗಿಯ ಕಾರ್ಮಿಕ ನಿರೀಕ್ಷಕರು, ಪೋಲಿಸ್ ಇಲಾಖೆ, ತಾಲ್ಲೂಕು ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿಶು ಅಭಿವೃದ್ಧಿ ಇಲಾಖೆ
ಹಾಗೂ ಇನ್ನಿತರೆ ತಾಲೂಕು ಮಟ್ಟದ ಸಿಬ್ಬಂದಿಗಳು/ಅಧಿಕಾರಿಗಳು ಹಾಜರಿದ್ದರು.
ಈ ಸಂದರ್ಭದಲ್ಲಿ ವಿವಿಧ ಹೋಟೆಲ್, ಗ್ಯಾರೇಜ್, ಬೇಕರಿ ಅಂಗಡಿ, ಬಟ್ಟೆ ಅಂಗಡಿಗಳ ತಪಾಸಣೆ ನಡೆಸಿ ಕರಪತ್ರಗಳನ್ನು ಹಂಚಿ ಬಿತ್ತಿ ಪತ್ರಗಳನ್ನು ಆಂಟಿಸಿ ಜಾಗೃತಿ ಮೂಡಿಸಲಾಯಿತು. ಹಾಗೂ 18 ವರ್ಷದ ಒಳಗಿನ ಯಾವುದೇ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಮೂಡಿಸಲಾಯಿತು. ಈ ಸಮಯದಲ್ಲಿ ಯಾವುದೇ ಬಾಲ ಕಾರ್ಮಿಕ/ಕಿಶೋರ ಕಾರ್ಮಿಕ ಮಕ್ಕಳು ಪತ್ತೆಯಾಗಿರುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!