ಆ.24 ರಂದು “ಮಹಾಶಕ್ತಿ ವೀರಭದ್ರ” ಯಕ್ಷಗಾನ ಪ್ರದರ್ಶನ
ಕೊಪ್ಪಳ : ಕರಾವಳಿ ಬಳಗ ಕೊಪ್ಪಳ, ಜಿಲ್ಲಾ ಹೋಟೆಲ್ ಮಾಲೀಕರ ಸಂಘ ಇವರ ಸಂಯಕ್ತಾಶ್ರಯದಲ್ಲಿ
ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ , ನಡೂರು, ಮಂದಾರ್ತಿ ಇವರ ವತಿಯಿಂದ ದಿ.24 ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಎಂ.ಪಿ ಪ್ಯಾಲೇಸ್ ನಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಪ್ರದರ್ಶನ ಜರುಗುವುದು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ವಹಿಸುವರು,ಉದ್ಘಾಟನೆಯನ್ನು ಸಂಸದ ರಾಜಶೇಖರ ಹಿಟ್ನಾಳ ನೆರವೇರಿಸುವುದು
ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಸಂಗಣ್ಣ ಕರಡಿ,ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ,
ಕರ್ನಾಟಕ ರಾಜ್ಯ ಹೋಟೆಲ್ ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ,ಕೊಪ್ಪಳದ ಕರಾವಳಿ ಬಳಗದ ಗೌರವಾಧ್ಯಕ್ಷ ಜೀವನ ಶೆಟ್ಟಿ,ಹಿರಿಯ ಸಾಹಿತಿಗಳು ಹಾಗೂ ಚಲನಚಿತ್ರ ನಿರ್ಮಾಪಕ ಡಾ.ಮಹಾಂತೇಶ ಮಲ್ಲನಗೌಡ್ರು ಸದಾಶಿವ ಅಮೀನ್ ಭಾಗವತರು ಮಂದಾರ್ತಿ ಮೇಳ ಪಾಲ್ಗೊಳ್ಳುವರು ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೊಪ್ಪಳ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಶಿಕರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.