ಶೈಕ್ಷಣಿಕ ಕಾರ್ಯಾಗಾರ, ಸನ್ಮಾನ ಕಾರ್ಯಕ್ರಮ

Get real time updates directly on you device, subscribe now.

ಕನಕಗಿರಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳ ಕಚೇರಿಗಳ ಕಚೇರಿ ಗಂಗಾವತಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಆಶ್ರಯದಲ್ಲಿ
ತಾಲ್ಲೂಕು ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಎನ್ಎಂಎಂಎಸ್ , ನವೋದಯ,ಮೊರಾರ್ಜಿ, ಆದರ್ಶ ಇತರೆ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯ ಉಚಿತ ತರಬೇತಿ ಉದ್ಘಾಟನೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಇಲ್ಲಿನ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಶನಿವಾರ
ಬೆಳಿಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು
ಉದ್ಘಾಟಿಸುವರು.
ಸಂಸದ ಕೆ.‌ ರಾಜಶೇಖರ ಹಿಟ್ನಾಳ ಅವರು ನಿವೃತ್ತ ಶಿಕ್ಷಕರು ಹಾಗೂ ತರಬೇತಿ ಸಂಪನ್ಮೂಲ ವ್ಯಕ್ತಿಗಳಿಗೆ ಸನ್ಮಾನಿಸುವರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ತಹಶೀಲ್ದಾರ್ ವಿಶ್ವನಾಥ ಮುರುಡಿ
ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ಅವರು ಅವರು 2023-24ನೇ ಸಾಲಿನ ಎನ್ ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸುವರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ‌ ಜಿಲ್ಲಾಧ್ಯಕ್ಷ ಶರಣಬಸನಗೌಡ ಪಾಟೀಲ  ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ
ಮುನಿರಾಬಾದ ಡಯಟ್ ಹಿರಿಯ ಉಪನ್ಯಾಸಕ ಸೋಮಶೇಖರಗೌಡ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.‌ಮಂಜುನಾಥ ಅವರು ಭಾಗವಹಿಸುವರು. ಲೇಖಕ ವಿ.‌ವಿ.‌ಗೊಂಡಬಾಳ ಅವರು ಉಪನ್ಯಾಸ ನೀಡುವರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ‌ದ ತಾಲ್ಲೂಕು ಅಧ್ಯಕ್ಷೆ ಶಂಶಾದಬೇಗಂ ಅವರು ಆಶಯ ನುಡಿ ವ್ಯಕ್ತ ಪಡಿಸುವರು. ತಾಲ್ಲೂಕು ಮಟ್ಟದ ಅಧಿಕಾರಿಗಳು, ಸೇರಿದಂತೆ ಗಣ್ಯರು ಹಾಗೂ ಇತರರು ಭಾಗವಹಿಸುವರು ಎಂದು ಸಂಘದ ಗೌರವಾಧ್ಯಕ್ಷ ಶೇಖರಯ್ಯ ಕಲ್ಮಠ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಶಿರಿಗೇರಿ ಅವರು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!