ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮವು 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಲ ಮತ್ತು ಸಹಾಯಧನ ಯೋಜನೆ, ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ ಮತ್ತು ರೇಷ್ಮಾ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧ ಧರ್ಮೀಯರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಫಲಾನುಭವಿಗಳು ಇಲಾಖಾ ವೆಬ್‌ಸೈಟ್  kmdconline.karnataka.gov.in ನಲ್ಲಿ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಯೋಜನೆಗಳಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂರವಾಣಿ ಸಂಖ್ಯೆ: 08539-225008ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!