ಅರಿವು ವಿಧ್ಯಾಭ್ಯಾಸ ಸಾಲ ರಿನ್ಯೂವಲ್ ಯೋಜನೆ: ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ಅರಿವು ವಿಧ್ಯಾಭ್ಯಾಸ ಸಾಲ (ರಿನ್ಯೂವಲ್) ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಮ್.ಡಿ. ಎಮ್,ಎಸ್) ದಂತ ವೈದ್ಯಕೀಯ (ಬಿ,ಡಿ.ಎಸ್/ಎಂಡಿ.ಎಸ್), ಆಯುಷ್ (ಬಿ.ಆಯುಷ್, ಎಂ.ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಮ್.ಇ, ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ, ಎಂ.ಆರ್ಕ್), ಎಂಬಿಎ, ಎಂಸಿಎ, ಎಲ್.ಎಲ್.ಬಿ., ಬಿಎಸ್ಸಿ ಹಾರ್ಟಿಕಲ್ಚರ್, ಅಗ್ರಿಕಲ್ಚರ್ ಇಂಜಿನಿಯರಿಂಗ್, ಡ್ರೈರಿ ಟೆಕ್ನಾಲಜಿ, ಫಾರೆಸ್ಟರಿ, ವೆಟರ್ನರಿ & ಎನಿಮಲ್ಸ್ ಟೆಕ್ನಾಲಜಿ, ಮೀನುಗಾರಿಕೆ, ರೇಷ್ಮೆಕೃಷಿ, ಹೋಮ್/ಕಮ್ಯುನಿಟಿ ಸೈನ್ಸಸ್ ಫುಡ್ ನ್ಯೂಟ್ರಿಷನ್ & ಡಯೆಟಿಕ್ಸ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ.ಡಿ & ಡಿ.ಫಾರ್ಮಾಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟನ್ನು ಪಾವತಿಸಬೆಕಾಗುತ್ತದೆ. ಶೇ.12ರಷ್ಟು ಮೊತ್ತವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು. ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ kmdconline. karnataka.gov.in ನಲ್ಲಿ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂರವಾಣಿ ಸಂಖ್ಯೆ: 08539-225008ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಯನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟನ್ನು ಪಾವತಿಸಬೆಕಾಗುತ್ತದೆ. ಶೇ.12ರಷ್ಟು ಮೊತ್ತವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು. ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ kmdconline.
Comments are closed.