ಮಾಧ್ಯಮದಿಂದ ಸಮಾಜ ಬದಲಾವಣೆ ಸುಲಭ ಸಾಧ್ಯ: ನ್ಯಾ. ಸಂತೋಷ್ ಹೆಗ್ಡೆ

Get real time updates directly on you device, subscribe now.

 ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ

ಬೆಂಗಳೂರು: ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿರುವ ಮಾಧ್ಯಮದಿಂದ ಕಾನೂನು ಚೌಕಟ್ಟಿನಲ್ಲಿ ಸಮಾಜ ಬದಲಾವಣೆ ಸುಲಭ ಸಾಧ್ಯ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಧ್ಯಮವು ದೇಶಕ್ಕೆಂದೂ ಅಭಿವೃದ್ಧಿಪೂರಕವಾಗಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ಉತ್ತಮ ಸಂದೇಶವನ್ನು ಸಮಾಜವು ನಿರೀಕ್ಷಿಸುತ್ತದೆ. ಆ ನಿಟ್ಟಿನಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಧ್ಯಮದಿಂದ ಆಗಬೇಕು ಎಂದೂ ಅವರು ಅಭಿಪ್ರಾಯಪಟ್ಟರು.

 

ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಆಯೇಷಾ ಖಾನಂ, ಮಾಧ್ಯಮಗಳು ಪ್ರಜಾಪ್ರಭುತ್ವದ ಕನ್ನಡಿಯಾಗಿದ್ದು, ಪತ್ರಕರ್ತರು ಪೂರ್ವಾಗ್ರಹಪೀಡಿತರಾಗಿ ಕಾರ್ಯನಿರ್ವಹಿಸಕೂಡದು ಎಂದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆಶಯ ಭಾಷಣ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಮಸ್ಯೆ ಮತ್ತು ಸವಾಲುಗಳು ಸಂಘಟನೆಗಳಲ್ಲಿ ಸಾಮಾನ್ಯವಾಗಿದ್ದು ಅವುಗಳನ್ನು ಮೆಟ್ಟಿ ನಿಲ್ಲಬೇಕಾದುದು ಅತ್ಯಗತ್ಯ. ಬೆಂಗಳೂರು ಜಿಲ್ಲಾ ಘಟಕವು ಈ ನಿಟ್ಟಿನಲ್ಲಿ ಸಕ್ರಿಯವಾಗಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

 

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ, ಮಾಧ್ಯಮಗಳು ನಕಾರಾತ್ಮಕ ವಿಷಯಗಳ ಬಗ್ಗೆ ಗಮನಹರಿಸಬೇಕಾದುದ್ದು ಅನಿವಾರ್ಯವಾಗಿದ್ದು, ಸಮುದಾಯಕ್ಕೆ ಸದಾ ಉತ್ತಮ ಸಂದೇಶ ನೀಡಬೇಕು ಎಂದರು.

 

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ನಗರ ಜಿಲ್ಲಾ ಘಟಕವು ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ನಡೆಸುವ ಆಶಯವನ್ನೊಂದಿದೆ ಎಂದರು.

 

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಯಾವುದೇ ಸಂಘವು ಸದಾ ಕ್ರಿಯಾಶೀಲವಾಗುವುದರಲ್ಲಿ ಸದಸ್ಯರ ಪಾತ್ರ ಬಹುಮುಖ್ಯ ಎಂದರು.

 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಯೂ.ಡಬ್ಲ್ಯೂ.ಜೆ. ಪ್ರಧಾನ ಕಾರ್ಯದರ್ಶಿ  ಜಿ.ಸಿ. ಲೋಕೇಶ, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ಭಾಗವಹಿಸಿದ್ದರು.

 

ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಸೋಮಶೇಖರ ರೆಡ್ಡಿ, ಚಂದ್ರಕಾಂತ್ ವಡ್ಡು ಹಾಗೂ ಈಶ್ವರ್ ಅವರನ್ನು ಸನ್ಮಾನಿಸಲಾಯಿತು.

 

ಕಳೆದ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ನಗರ ಘಟಕದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಲಾಯಿತು.

 

ಪತ್ರಕರ್ತರ ಸಂಘದ ಚಾಮರಾಜ ನಗರ ಜಿಲ್ಲಾಧ್ಯಕ್ಷ ದೇವರಾಜು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಟಿ.ಎನ್.ಮೊದಲಿಯಾರ್, ಧಾರವಾಡ ಜಿಲ್ಲಾಧ್ಯಕ್ಷ ಲೋಚನೇಶ್ ಹೂಗಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್, ದಾವಣಗೆರೆ ಜಿಲ್ಲಾ ರಾಷ್ಟೀಯ ಕಾರ್ಯಕಾರಿಣಿ ಸದಸ್ಯ ಒಡೆಯರ್,

ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶಂಭುಲಿಂಗಯ್ಯ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ದೇವರಾಜ್, ಬೆಂಗಳೂರು ನಗರ ಘಟಕದ ಪದಾಧಿಕಾರಿಗಳಾದ ಕೆ.ಎಂ.  ಜಕ್ರಿಯಾ, ಎನ್. ಶ್ರೀನಾಥ್, ಆರ್ ಜೈಕುಮಾರ್, ಆರ್ ರುದ್ರಸ್ವಾಮಿ, ಎಸ್.ಡಿ. ಚಿಕ್ಕಣ್ಣ, ಪರಿಮಳ, ಬಸವರಾಜ್, ಸಮಿತಿ ಸದಸ್ಯರಾದ ಶಿವರಾಜ್, ಡಿ.ಎಲ್‌. ಹರೀಶ್, ಕೆ.ಎಲ್. ಲೋಕೇಶ್, ಮೋಹನ್, ಕೃಷ್ಣೇಗೌಡ, ಗೋದಾವರಿ, ವಿಜಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ಕಾರ್ಯಕ್ರಮದ ಆರಂಭದಲ್ಲಿ ಕೆ.ವಿ.ಪರಮೇಶ್ ಸ್ವಾಗತ ಕೋರಿದರು, ಕೊನೆಯಲ್ಲಿ ಜೈಕುಮಾರ್ ಧನ್ಯವಾದವನ್ನರ್ಪಿಸಿದರು.

Get real time updates directly on you device, subscribe now.

Comments are closed.

error: Content is protected !!
%d bloggers like this: