ಜಿಲ್ಲೆಯಲ್ಲಿ ಹಾಲು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಿ: ನಲಿನ್ ಅತುಲ್

Get real time updates directly on you device, subscribe now.

: ಜಿಲ್ಲೆಯಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹಿಸಿ, ಹಾಲು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪಶು ಇಲಾಖೆಯ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 22ರಂದು ನಡೆದ ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಉಪ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಕಾಲಕ್ಕೆ ತಕ್ಕಂತೆ ಅಗತ್ಯ ಲಸಿಕಾ ಸೇವೆಗಳನ್ನು ನೀಡಬೇಕು. 2030ರ ವೇಳೆಗೆ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆಯನ್ನು 2.37 ಲಕ್ಷ ಟನ್‌ಗಳಿಂದ 3.60 ಲಕ್ಷ ಟನ್‌ಗಳಿಗೆ ಹೆಚ್ಚಿಸಲು ಮತ್ತು ಮತ್ತು ದೇಶಿಯ ಹಾಲು ಉತ್ಪಾದನೆಯಿಂದ ಹೆಚ್ಚುತ್ತಿರುವ ಹಾಲಿನ ಬೇಡಿಕೆಯನ್ನು ಪೂರೈಸಲು ಕ್ರಮ ವಹಿಸಬೇಕು. ಹೈನುಗಾರಿಕೆ ಯೋಜನೆಯಡಿ ರೈತ ಮಹಿಳೆಯರಿಗೆ ಪ್ರೋತ್ಸಾಹಿಸುವ ಹಸು, ಎಮ್ಮೆ ಖರೀದಿಗಾಗಿ ಇರುವ ಸಹಾಯದನ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ನೀಡಬೇಕು. ಈ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಇದಲ್ಲದೇ ಇಲಾಖೆಗಳ ಸೌಲಭ್ಯಗಳನ್ನು ರೈತರಿಗೆ ಒದಗಿಸುವ ಮೂಲಕ ಕೃಷಿ ಮಟ್ಟದಲ್ಲಿ ಹಾಲು ಉತ್ಪಾದನೆ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸಲು ಪ್ರಯತ್ನಿಸಬೇಕು. ಇದರ ಜೊತೆಗೆ ಕೋಳಿ ಸಾಕಾಣಿಕೆಗಾಗಿ ಇರುವ ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೀಡಬೇಕು. ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಲ್ಲಿ ಸ್ವಚ್ಛತಾ ಮತ್ತು ಆರೋಗ್ಯದ ಕ್ರಮಗಳ ಪಾಲನೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೇಳಿದರು.
ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ನೀಡಬೇಕು. ಅರ್ಹ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಆದ್ಯತೆ ನೀಡಬೇಕು. ಫಲಾನುಭವಿಗಳ ಆಯ್ಕೆಯನ್ನು ನಿಯಮಾನುಸಾರ ಆಯ್ಕೆ ಸಮಿತಿಯ ಮೂಲಕವೇ ಮಾಡಬೇಕು. ಜಾನುವಾರು ಪ್ರಾಣ ಹಾನಿ ಪ್ರಕರಣಗಳಡಿ ಪರಿಹಾರ ಪ್ರಕವನ್ನು ಸಹ ಸಂಬAಧಪಟ್ಟ ಜಾನುವಾರು ಮಾಲಿಕರಿಗೆ ತ್ವರಿತವಾಗಿ ವಿತರಿಸಲು ಪಶು ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಪಶು ಇಲಾಖೆ ಉಪನಿರ್ದೇಶಕರಾದ ಡಾ ಪಿ.ಎಂ.ಮಲ್ಲಯ್ಯ ಅವರು ಮಾತನಾಡಿ, 20ನೇ ಜಾನುವಾರು ಗಣತಿಯ ಅಂಕಿ-ಅಂಶಗಳನ್ವಯ ಕೊಪ್ಪಳ ಜಿಲ್ಲೆಯಲ್ಲಿ 2,94,880 ದನ ಎಮ್ಮೆಗಳು ಮತ್ತು 7,97,945 ಕುರಿ ಮೇಕೆಗಳು ಇರುತ್ತವೆ. ಜಿಲ್ಲೆಯ ಒಟ್ಟು ದನ ಎಮ್ಮೆಗಳ ಪೈಕಿ ಅಂದಾಜು 25,000 ಸಂಚಾರಿ ದನಗಳು ಇರುತ್ತವೆ. ಹಲವು ಗ್ರಾಮಗಳಲ್ಲಿ ಕೆಲವು ಕುಟುಂಬಗಳು ರೈತರು ಹಿಂಡುಗಳಲ್ಲಿ ದನಗಳನ್ನು ಸಾಕುತ್ತಾರೆ. ಪ್ರತಿ ಹಿಂಡಿನಲ್ಲಿ ಸುಮಾರು 100 ರಿಂದ 600 ಕ್ಕೂ ಹೆಚ್ಚು ದನಗಳಿವೆ. ಆದೇ ರೀತಿ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಸಂಚಾರಿ ಕುರಿ-ಮೇಕೆಗಳು ಇದ್ದು, ಪ್ರತಿ ಹಿಂಡಿನಲ್ಲಿ ಅಂದಾಜು 100 ರಿಂದ 3000 ವರೆಗೆ ಕುರಿ ಮೇಕೆಗಳಿವೆ. ಮೇವನ್ನು ಆಧರಿಸಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಪ್ರದೇಶಗಳಿಗೆ ಜಾನುವಾರುಗಳನ್ನು ಮೇಯಿಸಲು ಕೊಂಡೊಯ್ಯುತ್ತಾರೆ. ವಾಸ್ತವವಾಗಿ ಈ ಜಾನುವಾರುಗಳು ಜಿಲ್ಲೆಯ ಮತ್ತು ಅಕ್ಕಪಕ್ಕದ ಜಿಲ್ಲೆಗಳ, ಹುಲ್ಲುಗಾವಲು ಪ್ರದೇಶ, ಅರಣ್ಯ ಪ್ರದೇಶ, ನೀರಾವರಿ ಪ್ರದೇಶ ಮತ್ತು ಚೌಗು ಪ್ರದೇಶಗಳಲ್ಲಿ ಉದ್ಭವವಾಗುವ ಮೇವಿನ ಮೇಲೆಯೇ ಸಂಪೂರ್ಣವಾಗಿ ಅವಲಂಬಿತವಾಗಿರುತ್ತವೆ. ಮಳೆಗಾಲದ ಮುಂಗಾರು ಋತುವಿನಲ್ಲಿ ಈ ಸಂಚಾರಿ ದನಗಾಹಿಗಳು ತಮ್ಮ ತಮ್ಮ ಜಾನುವಾರುಗಳನ್ನು ಕೊಪ್ಪಳ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ ಮತ್ತು ಖಾಯಂ ಗೋಮಾಳಗಳಲ್ಲಿ ಮೇಯಿಸುತ್ತಾರೆ. ಹೈನುಗಾರಿಕೆ, ಕುರಿ ಸಾಕಾಣಿಕೆ ಮತ್ತು ಇತರ ಕಾರ್ಯಕ್ರಮದಡಿ ರೈತರಿಗೆ ಇಲಾಖೆಯ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಕೊಪ್ಪಳ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ ಉಕ್ಕುಂದ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ ಮಾನೆ ಸೇರಿದಂತೆ ರೇಷ್ಮೆ, ಮೀನುಗಾರಿಕೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: