ಯುವ ರೆಡ್ ಕ್ರಾಸ್ ವಿಭಾಗ ಮಟ್ಟದ ಕಾರ್ಯಾಗಾರ : ಮಾನವೀಯತೆಗಾಗಿ ನಡಿಗೆ

Get real time updates directly on you device, subscribe now.

ಕೊಪ್ಪಳ

ಭಾರತೀಯ ರೆಡ್ ಕ್ರಾಸ್ ವತಿಯಿಂದ ಕಲಬುರಗಿ ವಿಭಾಗಮಟ್ಟದ ಯುವ ರೆಡ್ ಕ್ರಾಸ್ ಕಾರ್ಯಾಗಾರವನ್ನು ಆ. 30,31, ಹಾಗೂ ಸೆ. 1 ರಂದು ಕೊಪ್ಪಳ ನಗರದಲ್ಲಿರುವ ಮಹಾವೀರ ಸಮುದಾಯಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಆ. 30 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಾಗಾರದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಆರ್ಥಿಕ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಉದ್ಘಾಟಿಸುವರು. ಸಾನಿಧ್ಯವನ್ನು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ವಹಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಸೋಮರಡ್ಡಿ ಅಳವಂಡಿ ಅವರು ವಹಿಸುವರು.

ಮುಖ್ಯಅತಿಥಿಗಳಾಗಿ ಭಾರೆಕ್ರಾ ಸಂಸ್ಥೆಯ ರಾಜ್ಯ ಶಾಖೆಯ ಸಭಾಪತಿ ವಿಜಯಕುಮಾರ ಪಾಟೀಲ್, ವಿಧಾನಸಭೆ ವಿರೋಧಪಕ್ಷದ  ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕರಾದ ರಾಘವೇಂದ್ರ ಹಿಟ್ನಾಳ, ಗಾಲಿ ಜನಾರ್ದನರೆಡ್ಡಿ, ವಿಪ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ವಿವಿ ಕುಲಪತಿ ಡಾ. ಬಿ.ಕೆ. ರವಿ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜಾದ್ ಪಟೇಲ್, ಜಿಲ್ಲಾಧಿಕಾರಿ ಹಾಗೂ ಭಾರೆಕ್ರಾ ಸಂಸ್ಥೆಯ ಅಧ್ಯಕ್ಷರಾದ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್ ರತ್ಮಂ ಪಾಂಡೆಯ, ಎಸ್ಪಿ ಡಾ. ರಾಮ ಎಲ್ ಅರಸಿದ್ದಿ, ಯುವ ರೆಡ್ ಕ್ರಾಸ್ ಸಂಸ್ಥೆಯ ಉಪಸಮಿತಿ ಸದಸ್ಯ ಎಂ.ಎಸ್. ಶರತ್, ಡಿಎಚ್ಓ ಡಾ. ಟಿ. ಲಿಂಗರಾಜ, ಕೀಮ್ಸ್ ನಿರ್ದೇಶ ಡಾ. ವಿಜಯಕುಮಾರ ಇಟಗಿ,  ಭಾರೆಕ್ರಾ ಪ್ರಕಾ ಎಚ್. ಎಸ್. ಬಾಲಸುಬ್ರಮಣ್ಯ, ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ನಾಗರಾಜ ಜುಮ್ಮಣ್ಣವರ, ಪದವಿಪೂರ್ಣ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ ಜಿ.ಎಚ್., ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಶ್ರೀಶೈಲ ಬಿರಾದರ, ಬಿಇಓ ಶಂಕರಯ್ಯ ಟಿ.ಎಸ್. ಭಾರೆಕ್ರಾ ರಾಜ್ಯ ಶಾಖೆ ಸದಸ್ಯ ಡಾ. ಚಂದ್ರಶೇಖರ ಕರಮುಡಿ, ಉಪಸಭಾಪತಿ ಡಾ. ಗವಿಸಿದ್ದನಗೌಡ, ನಿರ್ದೇಶಕ ರಾಜೇಶ ಯಾವಗಲ್ ಸೇರಿದಂತೆ ಅನೇಕರು ಭಾಗವಹಿಸುವರು ಎಂದು ಭಾರೆಕ್ರಾ ಸಂಸ್ಥೆಯ ಪ್ರಧಾನಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಕುರಿತು ಸಂಪನ್ಮೂಲಕ ವ್ಯಕ್ತಿಗಳಿಂದ ಉಪನ್ಯಾಸ ನಡೆಯಲಿದೆ. ಕಲಬುರಗಿ ವಿಭಾಗದ ವ್ಯಾಪ್ತಿಯ  ಏಳು ಜಿಲ್ಲೆಯ ಆಯ್ದು ವಿದ್ಯಾರ್ಥಿಗಳ ಹಾಗೂ ವಿವಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮಾನವೀಯತೆಗಾಗಿ ನಡಿಗೆ

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ವಿಶ್ವಶಾಂತಿ ದಿನಾಚರಣೆ ಅಂಗವಾಗಿ ಮಾನವೀಯತೆಗಾಗಿ ನಡಿಗೆಯನ್ನು ಆ. 30 ರಂದು ಬೆಳಗ್ಗೆ 9 ಗಂಟೆಗೆ ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಿಂದ ಅಶೋಕವೃತ್ತದ ಮೂಲಕ ಮಹಾವೀರ ಕಲ್ಯಾಣಮಂಟಪದವರೆಗೂ ನಡೆಯಲಿದೆ.

ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಚಾಲನೆ ನೀಡಲಿದ್ದಾರೆ,  ಕಾಲೇಜಿನ ಯುವ ರೆಡ್ ಕ್ರಾಸ್ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: